ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗುತ್ತಿದ್ದು, ಮಹತ್ವದ ಮಸೂದೆಗಳನ್ನು ಜಾರಿಗೊಳಿಸುವ ಉದ್ದೇಶ ಕೇಂದ್ರಕ್ಕಿದೆ. ಆದರೆ ಪ್ರತಿಪಕ್ಷಗಳು ಹಲವಾರು ವಿಷಯಗಳನ್ನು ಪ್ರಸ್ತಾಪಿಸಿ ಕಲಾಪಕ್ಕೆ ಅಡ್ಡಿಪಡಿಸುವ ಸಾಧ್ಯತೆ ಇದೆ.
ಅರುಣಾಚಲ ಪ್ರದೇಶದ ಬಗೆಗಿನ ಸುಪ್ರೀಂ ತೀರ್ಪು, ಭಾರತದ ಎನ್ಎಸ್ಜಿ ಸದಸ್ಯತ್ವ ವೈಫಲ್ಯ, ಕಾಶ್ಮೀರದ ಹಿಂಸಾಚಾರ ಈ ವಿಷಯಗಳನ್ನು ಪ್ರಸ್ತಾಪಿಸಿ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಮುಗಿಬೀಳಲು ಸನ್ನದ್ಧವಾಗಿವೆ.
ಇನ್ನೊಂದೆಡೆ ಸರ್ಕಾರ ಜಿಎಸ್ಟಿ ಮಸೂದೆಯನ್ನು ಶತಾಯ ಗತಾಯ ಜಾರಿಗೊಳಿಸುವ ಗುರಿ ಹೊಂದಿದೆ. ಈ ಬಗ್ಗೆ ಈಗಾಗಲೇ ಹಲವು ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಮಾತನಾಡಿದೆ.
ಶುಕ್ರವಾರ ವಿತ್ತಸಚಿವ ಅರುಣ್ ಜೇಟ್ಲಿ, ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ವೆಂಕಯ್ಯ ನಾಯ್ಡು ಕಾಂಗ್ರೆಸ್ ನಾಯಕರಾದ ಗುಲಾಂ ನಬಿ ಆಜಾದ್ ಮತ್ತು ಆನಂದ್ ಶರ್ಮಾ ಅವರನ್ನು ಭೇಟಿಯಾಗಿ ಜಿಎಸ್ಟಿ ಬಗೆಗಿನ ಭಿನ್ನಾಭಿಪ್ರಾಯ ತೊಡೆದು ಹಾಕಲು ಪ್ರಯತ್ನಿಸಿದ್ದಾರೆ.
ಸಮಾನ ನಾಗರಿಕ ಸಂಹಿತೆ ಸಾಧಕ ಬಾಧಕಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಂದ್ರ ಕಾನೂನು ಸಮಿತಿಗೆ ಸೂಚನೆ ನೀಡಿದ್ದು ಕೂಡ ಸದನದಲ್ಲಿ ಬಿಸಿಯೇರಿಸುವ ಸಾಧ್ಯತೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.