ನವದೆಹಲಿ : ರಾಜ್ಯಸಭೆಗೆ ಕರ್ನಾಟಕದಿಂದ ಆಯ್ಕೆಯಾದ ಕೇಂದ್ರ ವಾಣಿಜ್ಯ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಎಲ್ಲರ ಗಮನ ಸೆಳೆದರು.
ಮುಂಗಾರು ಅಧಿವೇಶನದ ಮೊದಲ ದಿನವಾದ ಇಂದು ಸೋಮವಾರ ಸಂಸತ್ತಿನಲ್ಲಿ ನೂತನ ರಾಜ್ಯಸಭಾ ಸದಸ್ಯರ ಪ್ರಮಾಣ ವಚನ ನಡೆಯಿತು. ಒಟ್ಟು 43 ನೂತನ ರಾಜ್ಯಸಭಾ ಸದಸ್ಯರು ಪ್ರಮಾಣವಚನ ಸ್ವೀಕಾರ ಮಾಡಿದರು.
ಎಂ. ವೆಂಕಯ್ಯನಾಯ್ಡು, ಪಿಯೂಶ್ ಗೋಯಲ್, ಅನಿಲ್ ಮಾಧವ್ ದಾವೆ, ಮುಖ್ತಾರ್ ಅಬ್ಬಾಸ್ ನಖ್ವಿ, ಮಿಶಾ ಭಾರ್ತಿ, ಪಿ. ಚಿದಂಬರಂ, ಕಪಿಲ್ ಸಿಬಲ್, ಸೇರಿದಂತೆ ಹಲವರು ಪ್ರಮಾಣ ವಚನ ಸ್ವೀಕರಿಸಿದರು.
ಕೆಲವರು ತಮ್ಮ ಮಾತೃಭಾಷೆಗಳಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಒಡಿಯಾ, ಪಂಜಾಬಿ, ತಮಿಳು, ಮರಾಠಿ, ಸಂಸ್ಕೃತ ಸೇರಿದಂತೆ ಹಲವು ಭಾಷೆಗಳಲ್ಲಿ ನೂತನ ಸಂಸದರು ಪ್ರಮಾಣ ವಚನ ಸ್ವೀಕರಿಸಿದರು.
ಇಂದು ರಾಜ್ಯಸಭೆಯು ನೂತನ ಸದಸ್ಯರ ಕುಟುಂಬದವರು, ಸ್ನೇಹಿತರಿಂದ ತುಂಬಿತ್ತು.
ಕರ್ನಾಟಕದಿಂದ ಆಯ್ಕೆಯಾಗುವ ಸಂದರ್ಭದಲ್ಲಿ ನಿರ್ಮಲಾ ಸೀತಾರಾಮನ್ ಅವರು, ‘ನನಗೆ ಸ್ವಲ್ಪ ಸ್ವಲ್ಪ ಕನ್ನಡ ಬರುತ್ತದೆ. ಸಂಪೂರ್ಣವಾಗಿ ಕನ್ನಡವನ್ನು ಕಲಿತು ಮಾತನಾಡುತ್ತೇನೆ’ ಎಂದಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.