ನವದೆಹಲಿ: ಈಗಾಗಲೇ ಬಿಜೆಪಿಯ ರಾಜ್ಯಸಭಾ ಸಂಸದ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿರುವ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಅವರ ಮುಂದಿನ ನಡೆ ಭಾರೀ ಕುತೂಹಲವನ್ನು ಕೆರಳಿಸಿದೆ.
ಮೂಲಗಳ ಪ್ರಕಾರ ಅವರು ಪಂಜಾಬ್ನಲ್ಲಿ ಎಎಪಿಯ ಸಿಎಂ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೀಗ ಅವರು ಸಿಎಂ ಅಭ್ಯರ್ಥಿಯಾಗಲ್ಲ, ಬದಲು ಎಎಪಿಯ ಸ್ಟಾರ್ ಪ್ರಚಾರಕರಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ಸ್ವತಃ ಎಎಪಿಯ ಮೂಲಗಳೇ ಈ ವಿಷಯವನ್ನು ಸ್ಪಷ್ಟಪಡಿಸಿವೆ.
ಬಿಜೆಪಿಯ ರಾಜ್ಯ ಘಟಕದೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಸಿಧು ಸೋಮವಾರ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಶೀಘ್ರದಲ್ಲೇ ಅವರು ಬಿಜೆಪಿಯನ್ನು ತೊರೆದು ಎಎಪಿ ಸೇರುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.