ನವದೆಹಲಿ: ಕಳೆದ ಎರಡು ವರ್ಷಗಳಲ್ಲಿ ದೇಶಿ ಮತ್ತು ವಿದೇಶಿ ಮೂಲಗಳಿಂದ ಸುಮಾರು 43,829 ಕೋಟಿ ಮೊತ್ತದ ಬಹಿರಂಗಪಡಿಸದೇ ಇರುವ ಹಣವನ್ನು ಸರ್ಕಾರ ವಶಕ್ಕೆ ಪಡೆದುಕೊಂಡಿದೆ ಎಂದು ಕೇಂದ್ರ ಹೇಳಿದೆ.
ವಿತ್ತ ಸಚಿವಾಲಯದ ರಾಜ್ಯ ಖಾತೆ ಸಚಿವ ಸಂತೋಷ್ ಕುಮಾರ್ ಗಂಗಾವರ್ ಅವರು ಮಂಗಳವಾರ ಈ ಬಗ್ಗೆ ರಾಜ್ಯಸಭೆಗೆ ಲಿಖಿತ ಮಾಹಿತಿಯನ್ನು ನೀಡಿದ್ದಾರೆ.
ಒನ್ ಟೈಮ್ ಕಾಂಪ್ಲಿಯನ್ಸ್ ವಿಂಡೋ ಮೂಲಕ ಈ ಮೊತ್ತವನ್ನು ಪಡೆಯಲಾಗಿದೆ.
ಕಳೆದೆರಡು ಹಣಕಾಸು ವರ್ಷದಲ್ಲಿ ಹಲವಾರು ಕ್ರಮಗಳನ್ನು ಕೈಗೊಳ್ಳುವ ಮೂಲಕ ಸರ್ಕಾರ ಇಷ್ಟೊಂದು ಮೊತ್ತ ಬಹಿರಂಗಪಡಿಸದೇ ಇರುವ ಮೊತ್ತವನ್ನು ವಶಕ್ಕೆ ಪಡೆದುಕೊಂಡಿದೆ ಎಂದಿದ್ದಾರೆ.
ಆಸ್ತಿ ಮೊತ್ತವನ್ನು ಬಹಿರಂಗಪಡಿಸಲು ಜೂನ್ 1, 2016ರಿಂದ ಸೆ.30, 2016ರವರೆಗೆ ಸರ್ಕಾರ ಗಡುವು ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.