ನವದೆಹಲಿ: ದೆಹಲಿಯಲ್ಲಿ ಶಬ್ದ ಮಾಲಿನ್ಯ ಉಂಟು ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ವಾಹನಗಳಿಗೆ ಅತೀ ಕರ್ಕಶವಾದ ಹಾರ್ನ್ಗಳನ್ನು ಬಳಸುವರರ ಮತ್ತು ಸೈಲೆಂಸರ್ಗಳನ್ನು ತೆಗೆಸುವವರ ವಿರುದ್ಧ 5000 ರೂ.ದಂಡ ವಿಧಿಸುವುದಾಗಿ ಘೋಷಿಸಿದೆ.
ಎನ್ಜಿಟಿ ಅಧ್ಯಕ್ಷ ಜಸ್ಟೀಸ್ ಸ್ವತಂತರ್ ಕುಮಾರ್ ಅವರನ್ನೊಳಗೊಂಡ ನ್ಯಾಯಪೀಠ ‘ಅನಗತ್ಯ ಮತ್ತು ಅಸಹನೀಯ’ ಶಬ್ದ ಮಾಲಿನ್ಯ ಉಂಟು ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ದೆಹಲಿ ಪೊಲೀಸರಿಗೆ ಸೂಚಿಸಿದೆ.
ಹಸಿರು ನ್ಯಾಯಪೀಠ ಪರಿಸರ ಪರಿಹಾರವಾಗಿ ದಂಡ ಕಟ್ಟಿದ ಹಣವನ್ನು ಪ್ರತ್ಯೇಕ ಖಾತೆಗೆ ಜಮಾ ಮಾಡುವಂತೆ ಸಂಚಾರ ಪೊಲೀಸ್ ಇಲಾಖೆಗೆ ನಿರ್ದೇಶಿಸಿದೆ. ಅಪರಾಧಿಗಳ ವಿರುದ್ಧ ಕ್ರಮಕ್ಕೆ ನೋಟಿಸ್ ಜಾರಿಗೊಳಿಸಲು ಸಂಚಾರ ಪೊಲೀಸ್ ಅಧಿಕಾರಿಗಳು ಹಸಿರು ನ್ಯಾಯಾಲಯದ ಸಹಕಾರ ಪಡೆಯುವ ಪೂರ್ಣ ಸ್ವಾತಂತ್ರ ಹೊಂದಿದ್ಧಾರೆ ಎಂದು ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.