ಗೋರಖ್ಪುರ್: ಉತ್ತರಪ್ರದೇಶದ ಗೋರಖ್ಪುರದಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಏಮ್ಸ್ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ಮಾಡಿದರು.
ಸುಮಾರು 1,011 ಕೋಟಿ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸೂಪರ್ ಸ್ಪೆಷ್ಯಾಲಿಟಿ ಆರೋಗ್ಯ ಕೇಂದ್ರ ಜನರಿಗೆ ಹೆಚ್ಚಿನ ಸೌಲಭ್ಯದೊಂದಿಗೆ ಉತ್ತಮ ವೈದ್ಯರ ತಂಡವನ್ನು ಹೊಂದಲಿದೆ.
ಅಲ್ಲದೇ ಪ್ರಧಾನಿಮೋದಿ ಅವರು ಅಲ್ಲಿಯ ಗೊಬ್ಬರ ಕಾರ್ಖಾನೆಗೆ ಶಂಕುಸ್ಥಾಪನೆ ಮಾಡಿದ್ದು, ಇದು ಸುಮಾರು 4,000 ಉದ್ಯೋಗ ಸೃಷ್ಟಿ ಮಾಡಲಿದ್ದು, ರೈತರಿಗೆ ಸಮರ್ಪಕ ಗೊಬ್ಬರ ಪೂರೈಕೆ ಮಾಡಲಿದೆ.
ಫರ್ಟಿಲೈಸರ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಎಫ್ಸಿಐಎಲ್) 1990ರಲ್ಲಿ ಸ್ಥಗಿತಗೊಂಡಿತ್ತು. ಇದು 6,000 ಅಂದಾಜು ವೆಚ್ಚದಲ್ಲಿ ವಿಶೇಷ ಘಟವು ಸಾರ್ವಜನಿಕ ವಲಯದ ಘಟಕಗಳ ಮೂಲಕ ಪುನಶ್ಚೇತನಗೊಳ್ಳಲಿದೆ.
ಎನ್ಟಿಪಿಸಿ, ಕೋಲ್ ಇಂಡಿಯಾ, ಇಂಡಿಯನ್ ಆಯಿಲ್ ಕಾಪೋರೇಶನ್ ಲಿಮಿಟೆಡ್ (ಐಒಸಿಎಲ್) ಜಂಟಿ ನೇತೃತ್ವದಲ್ಲಿ ಟೆಂಡರ್ ಮೂಲಕ ಗುತ್ತಿಗೆದಾರರ ನೇಮಕವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.