ಬೆಂಗಳೂರು : ಕರ್ನಾಟಕದಲ್ಲಿ ಪೊಲೀಸರ ಆತ್ಮಹತ್ಯೆ ಸರಣಿ ಮುಂದುವರೆದಿದೆ. ಶುಕ್ರವಾರವೂ ಇಂಡಿಯನ್ ರಿಸರ್ವ್ ಬೆಟಾಲಿಯನ್ (ಐಆರ್ಬಿ)ಗೆ ಸೇರಿದ 50 ವರ್ಷದ ಕಾನ್ಸ್ಟೇಬಲ್ ಅಣ್ಣಾರಾವ್ ಸಾಯಿಬಣ್ಣ ಗಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಲ್ಬುರ್ಗಿಯ ತಮ್ಮ ಸರ್ಕಾರಿ ಕ್ವಾರ್ಟರ್ಸ್ನಲ್ಲಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪೊಲೀಸ್ ಕ್ವಾರ್ಟರ್ಸ್ನ ಹಾಲ್ನಲ್ಲಿ ಇವರ ಶವ ನೇತಾಡುತ್ತಿದ್ದುದ್ದನ್ನು ಕಂಡು ಇವರ ಕುಟುಂಬ ಸದಸ್ಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
2015 ರಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಭಡ್ತಿ ಹೊಂದಿದ ಇವರನ್ನು ಐಆರ್ಬಿಗೆ ವರ್ಗಾವಣೆಗೊಳಿಸಲಾಗಿತ್ತು. ಈ ವರ್ಗಾವಣೆಯಿಂದ ಅವರು ಸಂತುಷ್ಟರಾಗಿರಲಿಲ್ಲ ಎನ್ನಲಾಗಿದೆ.
ಕೆಲ ದಿನಗಳಿಂದ ಮಾನಸಿಕವಾಗಿ ಇವರು ನೊಂದಿದ್ದರು ಎಂದು ಸಂಬಂಧಿಕರು ಹೇಳಿದ್ದಾರೆ.
ಅವರು ವರ್ಗಾವಣೆಗಾಗಿ ಹಾಕಿದ್ದ ಅರ್ಜಿ ಸ್ವೀಕಾರಗೊಳ್ಳದಿರುವುದೇ ಅವರ ಬೇಸರಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ಇವರೊಂದಿಗೆ ವರ್ಗಾವಣೆಯಾಗಿದ್ದ ಇತರ 8 ಮಂದಿ ಮತ್ತೆ ಕಲ್ಬುರ್ಗಿಗೆ ವರ್ಗಾವಣೆ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇದು ಅಣ್ಣಾರಾವ್ ಅವರನ್ನು ತೀವ್ರವಾಗಿ ಕಾಡಿತ್ತು ಎನ್ನಲಾಗಿದೆ.
ಒಂದು ತಿಂಗಳೊಳಗೆ ಆತ್ಮಹತ್ಯೆಗೆ ಶರಣಾಗುತ್ತಿರುವ 3ನೇ ಪೊಲೀಸ್ ಇವರಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.