ನವದೆಹಲಿ: ನೇಪಾಳವನ್ನು ಅಕ್ಷರಶಃ ಸ್ಮಶಾನ ಸದೃಶ್ಯವನ್ನಾಗಿಸಿದ ಭೂಕಂಪ ಭಾರತದ ಮೇಲೂ ಕೆಟ್ಟ ಪರಿಣಾಮವನ್ನು ಬೀರಿದೆ, ಶನಿವಾರ ಉತ್ತರಭಾರತದ ಹಲವೆಡೆ ಭೂಮಿ ಕಂಪಿಸಿದ ಹಿನ್ನಲೆಯಲ್ಲಿ ಉಂಟಾದ ದುರಂತದಿಂದಾಗಿ ೬೨ ಮಂದಿ ಸಾವಿಗೀಡಾಗಿದ್ದಾರೆ ಎಂದು ಗೃಹಸಚಿವಾಲಯ ಅಧಿಕೃತ ಮಾಹಿತಿ ನೀಡಿದೆ.
‘ನೇಪಾಳದ ಗಡಿ ರಾಜ್ಯವಾದ ಬಿಹಾರದಲ್ಲಿ ಅತಿಹೆಚ್ಚು ಅಂದರೆ 46 ಮಂದಿ ಸಾವಿಗೀಡಾಗಿದ್ದಾರೆ. ಉತ್ತರಪ್ರದೇಶದಲ್ಲಿ 13 ಮಂದಿ ಮೃತರಾಗಿದ್ದಾರೆ. ಒಟ್ಟು 259ಮಂದಿ ಗಾಯಗೊಂಡಿದ್ದಾರೆ’ ಎಂದು ಗೃಹ ಕಾರ್ಯದರ್ಶಿ ಎಲ್ಸಿ ಗೋಯಲ್ ತಿಳಿಸಿದ್ದಾರೆ.
ಸಾವಿಗೀಡಾದವರ ಕುಟುಂಬದವರಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.
‘ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ನಾಲ್ಕು ತಂಡಗಳನ್ನು ಈ ದುರಂತ ಪೀಡಿತ ಪ್ರದೇಶದಲ್ಲಿ ನಿಯೋಜಿಸಲಾಗಿದೆ. ಇನ್ನೂ ಹೆಚ್ಚಿನ ಸಹಾಯದ ಅಗತ್ಯಬಿದ್ದರೆ ತಕ್ಷಣ ನೀಡಲಾಗುವುದು’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.