ನವದೆಹಲಿ : ಕಳೆದ ತಿಂಗಳು ಆಪ್ಘಾನಿಸ್ಥಾನದ ಕಾಬೂಲ್ನಿಂದ ಶಂಕಿತ ಉಗ್ರರಿಂದ ಅಪಹರಣಕ್ಕೊಳಗಾಗಿದ್ದ ಜುಡಿತ್ ಡಿಸೋಜಾ ಎಂಬ ಭಾರತೀಯ ಮಹಿಳೆಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.
ಜುಡಿತ್ ಅವರನ್ನು ರಕ್ಷಣೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವ ಸುಷ್ಮಾ ಸ್ವರಾಜ್ ಅವರು ಟ್ವಿಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ.
ಜೂನ್ 9 ರಂದು ಕಾಬೂಲ್ನಲ್ಲಿ ಜುಡಿತ್ ಶಂಕಿತ ಉಗ್ರರಿಂದ ಅಪಹರಣಕ್ಕೊಳಗಾಗಿದ್ದರು. ಬಳಿಕ ಅವರು ಎಲ್ಲಿದ್ದಾರೆಂಬುದು ಯಾರಿಗೂ ತಿಳಿದಿರಲಿಲ್ಲ. ಅವರ ಕುಟುಂಬ ಸದಸ್ಯರು ಅವರನ್ನು ರಕ್ಷಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು. ಈ ಬಗ್ಗೆ ಕಾರ್ಯಪ್ರವೃತ್ತವಾಗಿದ್ದ ವಿದೇಶಾಂಗ ಸಚಿವಾಲಯ ಇದೀಗ ಅವರನ್ನು ರಕ್ಷಿಸುವಲ್ಲಿ ಸಫಲವಾಗಿದೆ.
ಅವರ ರಕ್ಷಣೆಗೆ ಯಾವ ಕ್ರಮ ಕೈಗೊಳ್ಳಲಾಯಿತು ಎಂಬ ಬಗ್ಗೆ ಸುಷ್ಮಾ ಸ್ವರಾಜ್ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಿಲ್ಲ.
ಜುಡಿತ್ ಅವರು ಕಾಬೂಲ್ನಲ್ಲಿ ಎನ್ಜಿಒ ಒಂದರಲ್ಲಿ ಕೆಲಸ ಮಾಡುತ್ತಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.