ದಿಬ್ರುಗಢ: ಅಸ್ಸಾಂನ 18 ಜಿಲ್ಲೆಗಳಲ್ಲಿ ಪ್ರವಾಹ ಭೀತಿ ತಲೆದೋರಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಅಸ್ಸಾಂನಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆ ಇಂದಿಗೂ ಮುಂದುವರೆದಿದ್ದು, ದಿಬ್ರುಗಢ ಸೇರಿದಂತೆ ಅಸ್ಸಾಂನ 18 ಜಿಲ್ಲೆಗಳಲ್ಲಿ ಹಲವು ಪ್ರದೇಶಗಳು ಜಲಾವೃತಗೊಂಡಿದೆ. ಪ್ರವಾಹದ ಭೀತಿ ಎದುರಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಇದರಿಂದಾಗಿ 12 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದ ಭೀತಿಯಲ್ಲಿದ್ದಾರೆ. ಜಿಲ್ಲಾಡಳಿತ ರಕ್ಷಣಾ ಕಾರ್ಯದಲ್ಲಿ ನಿರಂತರವಾಗಿ ಭಾಗಿಯಾಗಿದ್ದು, 220 ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದ್ದು, ಈಗಾಗಲೇ 88,000 ಜನರನ್ನು ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.
ವ್ಯವಸಾಯ ಪ್ರದೇಶವೂ ಜಲಾವೃತಗೊಂಡಿದ್ದರಿಂದ ಭಾರೀ ಪ್ರಮಾಣದ ಹಾನಿ ಸಂಭವಿಸಿದೆ ಎನ್ನಲಾಗಿದೆ.
ಕಾಜಿರಂಗ ಉದ್ಯಾನವನದ 60% ರಷ್ಟು ಭಾಗವು ಜಲಾವೃತಗೊಂಡಿರುವುದರಿಂದ ಅಲ್ಲಿರುವ ಪ್ರಾಣಿಗಳನ್ನು ಸ್ಥಳಾಂತರಿಸಲು ಚಿಂತಿಸಲಾಗುತ್ತಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.