ನವದೆಹಲಿ : ದೇಶದ ಅತಿ ದೊಡ್ಡ ಗ್ರಾಮ ಯಾವುದು ? ಎಷ್ಟು ಹಳ್ಳಿಗಳು ತಮ್ಮ ಘನ ಮತ್ತು ದ್ರವ ತ್ಯಾಜ್ಯಗಳ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಮಾಡುತ್ತದೆ ? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಸಲುವಾಗಿ ಕೇಂದ್ರ ಸರ್ಕಾರ ಇದೇ ಮೊದಲ ಬಾರಿಗೆ ದೇಶದಲ್ಲಿ ಆಗಸ್ಟ್ 15 ರಿಂದ ಸ್ವಚ್ಛ ಸಮೀಕ್ಷೆಯನ್ನು ನಡೆಸುತ್ತಿದೆ.
ದೇಶದ 6.5 ಲಕ್ಷ ಗ್ರಾಮಗಳನ್ನು ಈ ಸಮೀಕ್ಷೆ ಒಳಗೊಳ್ಳಲಿದ್ದು ಅವುಗಳ ಸ್ವಚ್ಛತೆಗೆ ಅನುಗುಣವಾಗಿ ರ್ಯಾಂಕಿಂಗ್ ನೀಡಲಾಗುತ್ತದೆ.
ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯ ಈ ಸಮೀಕ್ಷೆಯನ್ನು ನಡೆಸುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಸ್ವಚ್ಛಭಾರತ ಅಭಿಯಾನವನ್ನು ಗ್ರಾಮೀಣ ಭಾಗದಲ್ಲೂ ಪರಿಣಾಮಕಾರಿಯಾಗಿ ಜಾರಿಗೊಳಿಸುವ ಉದ್ದೇಶ ಇದರ ಹಿಂದಿದೆ.
ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಯಂದೇ ಈ ಸಮೀಕ್ಷೆ ಪ್ರಾರಂಭವಾಗಲಿದೆ.
ಗ್ರಾಮದಲ್ಲಿ ಎದ್ದು ಕಾಣುವ ಸ್ವಚ್ಛತೆ, ಬಯಲುಶೌಚ ಮುಕ್ತವಾಗಿದೆಯೇ ? ಎಷ್ಟು ಪರಿಣಾಮಕಾರಿಯಾಗಿ ಇವುಗಳು ತಮ್ಮ ತ್ಯಾಜ್ಯಗಳನ್ನು ನಿರ್ವಹಿಸುತ್ತಿದೆ ? ಎಂಬ ಮೂರು ಅಂಶಗಳನ್ನು ಪ್ರಮುಖವಾಗಿ ಗಣನೆಗೆ ತೆಗೆದುಕೊಂಡು ರ್ಯಾಂಕಿಂಗ್ ನೀಡಲಾಗುತ್ತದೆ.
ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಗ್ರಾಮಸಭಾ ಕಾರ್ಯ ನಿರ್ವಾಹಕರು ಈ ಸಮೀಕ್ಷೆಯನ್ನು ನಡೆಸಲಿದ್ದಾರೆ.
ಇದರ ಮೊದಲ ಫಲಿತಾಂಶ ಅಕ್ಟೋಬರ್ ತಿಂಗಳಲ್ಲಿ ಪ್ರಕಟವಾಗೊಳ್ಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.