ನವದೆಹಲಿ: ಬ್ರಿಟನ್ನ ನೂತನ ಪ್ರಧಾನಿಯಾಗಿ ಜುಲೈ 13 ರಂದು ಅಧಿಕಾರ ಸ್ವೀಕರಿಸಿದ ಥೆರೆಸಾ ಮೇ ಅವರನ್ನು ಅಭಿನಂದಿಸಿದ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು, ಎರಡೂ ರಾಷ್ಟ್ರಗಳ ನಡುವೆ ದ್ವಿಪಕ್ಷೀಯ ಪಾಲುದಾರಿಕೆಯ ವೃದ್ಧಿಗೆ ಭಾರತ ಬದ್ಧವಾಗಿದೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಹಾಗೂ ಥೆರೆಸಾ ಮೇ ಅವರ ನಡುವಿನ ದೂರವಾಣಿ ಸಂಭಾಷಣೆ ವೇಳೆ ವಿವಿಧ ಜಾಗತಿಕ ವೇದಿಕೆಗಳಲ್ಲಿ ಭಾರತಕ್ಕೆ ಬೆಂಬಲ, ಸ್ಥಿರ ಬೆಂಬಲ ಸೂಚಿಸಿದ ಬಗ್ಗೆ ಪ್ರಶಂಸಿಸಿದರು.
ಇದೇ ವೇಳೆ ಮೋದಿ ಅವರಿಗೆ ಧನ್ಯವಾದ ಹೇಳಿದ ಥೆರೆಸಾ ಮೇ ಅವರು ಎರಡು ರಾಷ್ಟ್ರಗಳ ನಡುವೆ ದ್ವಿಪಕ್ಷೀಯ ಸಂಬಂಧಗಳನ್ನು ವೃದ್ಧಿಸಲು ನಿಟಕವಾಗಿ ಕಾರ್ಯ ನಿರ್ವಹಿಸುವ ಹಾಗೂ ಜಾಗತಿಕ ಸವಾಲುಗಳನ್ನು ಪರಿಹರಿಸಲು ಹೆಚ್ಚಿನ ಸಹಕಾರ ನೀಡಲು ಮುಂದೆ ನೋಡುತ್ತಿರುವುದಾಗಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.