ಸುಳ್ಯ: ಸರಕಾರದ ಅಸಮರ್ಪಕ ಮರಳು ನೀತಿಯನ್ನು ಕೈ ಬಿಡಬೇಕು. ಅಂತರ್ ಜಿಲ್ಲಾ ಮರಳು ಸಾಗಾಟಕ್ಕೆ ಅವಕಾಶ ನೀಡದಂತೆ ಮತ್ತು ಸ್ಥಳೀಯವಾಗಿ ಮರಳು ತೆಗೆಯಲು ಪರವಾನಿಗೆ ನೀಡುವ ಮತ್ತಿತರ ಬೇಡಿಕೆಗಳನ್ನು ಮುಂದಿಟ್ಟು ಲಾರಿ ಚಾಲಕ, ಮಾಲಕರ ಸಂಘದ ವತಿಯಿಂದ ಸುಳ್ಯದಲ್ಲಿ ರಸ್ತೆ ತಡೆ ಮತ್ತು ಪ್ರತಿಭಟನೆ ನಡೆಸಲಾಯಿತು.
ಲಾರಿ ಚಾಲಕ, ಮಾಲಕರ ಸಂಘದ ಅಧ್ಯಕ್ಷ ದಿನೇಶ್ ಅಡ್ಕಾರ್ ಮಾತನಾಡಿ, ರಾಜ್ಯದಲ್ಲಿ ಏಕರೂಪ ಮರಳು ನೀತಿ ಜಾರಿಗೆ ತಂದು ಕರಾವಳಿಯಿಂದ ಹೊರ ಜಿಲ್ಲೆಗಳಿಗೆ ಮರಳು ಸಾಗಾಟ ಮಾಡಲಾಗುತ್ತಿದೆ. ಸಿಆರ್ಝಡ್ ಹೆಸರಿನಲ್ಲಿ ಉಪ್ಪುನೀರು ಇರುವಲ್ಲಿ ಮಾತ್ರ ಮರಳು ತೆಗೆಯಲು ಪರವಾನಿಗೆ ನೀಡಲಾಗುತ್ತದೆ. ಪ್ರತಿ ಲೋಡ್ಗೆ 600 ರೂಪಾಯಿ ಪರವಾನಿಗೆ ಶುಲ್ಕ ಇದ್ದರೂ ಮೂರರಿಂದ ನಾಲ್ಕು ಸಾವಿರಕ್ಕೆ ಅನಧಿಕೃತವಾಗಿ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಬಸ್ ನಿಲ್ದಾಣದ ಬಳಿ ಸಾಂಕೇತಿಕ ರಸ್ತೆ ತಡೆ ನಡೆಸಿ ಬಳಿಕ ಮೆರವಣಿಗೆಯಲ್ಲಿ ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರ್ರಿಗೆ ಮನವಿ ಸಲ್ಲಿಸಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.