ನವದೆಹಲಿ: ಸ್ವಾತಂತ್ರ್ಯ ದಿನ ಆಚರಿಸಲು ಹಾಗೂ ದೇಶದ ಜನತೆಯಲ್ಲಿ ರಾಷ್ಟ್ರಭಕ್ತಿ ಮೂಡಿಸಲು ಕೇಂದ್ರ ಸರ್ಕಾರ ‘ಭಾರತ ಪರ್ವ’ ಕಾರ್ಯಕ್ರಮ ಆಯೋಜಿಸಲಿದೆ.
ರಾಷ್ಟ್ರ ರಾಜಧಾನಿ ದೆಹಲಿಯ ರಾಜಪಥ್ನಲ್ಲಿ ಸ್ವಾತಂತ್ರ್ಯ ದಿನದ ಅಂಗವಾಗಿ ನಡೆಯಲಿರುವ ಭಾರತ ಪರ್ವ ಕಾರ್ಯಕ್ರಮದಲ್ಲಿ ಆಗಸ್ಟ್ 12ರಿಂದ 6 ದಿನಗಳ ಕಾಲ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರು ಭಾಹವಹಿಸುವ ಸಾಧ್ಯತೆ ಇದೆ ಎಂದು ಪ್ರವಾಸೋದ್ಯಮ ಸಚಿವಾಲಯ ತಿಳಿಸಿದೆ.
ಆಗಸ್ಟ್ 12ರಂದು ಸಂಜೆ 5 ಗಂಟೆಗೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು, ವಿವಿಧ ರಾಜ್ಯಗಳ ಕರಕುಶಲ ವಸ್ತು ಪ್ರದರ್ಶನ ಹಾಗೂ ಆಹಾರಗಳ ಸುಮಾರು 100 ಮಳಿಗೆಗಳು ತೆರೆಯಲಾಗುವುದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.