ನವದೆಹಲಿ : ಬಿಜೆಪಿಯ ಫೈರ್ಬ್ರಾಂಡ್ ನಾಯಕ ಎಂದೇ ಕರೆಯಲ್ಪಡುವ ಸುಬ್ರಮಣಿಯನ್ ಸ್ವಾಮಿಯವರು ಮಹಾತ್ಮಾ ಗಾಂಧಿ ಹತ್ಯೆ ಬಗೆಗಿನ ಸ್ಫೋಟಕ ಸತ್ಯವನ್ನು ಬಿಚ್ಚಿಡುವುದಾಗಿ ಹೇಳಿಕೊಂಡಿದ್ದಾರೆ.
ಇಟಲಿಯಿಂದ ಆಮದಾದ ಪಿಸ್ತೂಲ್ ಮೂಲಕ ನಾಥೂರಾಮ್ ಗೋಡ್ಸೆ ಮತ್ತು ಇತರರು ಸೇರಿ ಗಾಂಧೀಜಿ ಹತ್ಯೆ ಮಾಡಿದ್ದಾರೆ ಎಂಬ ವಾದ ಇವರದ್ದು. ಈ ಬಗೆಗಿನ ಮಾಹಿತಿಯನ್ನು ಆಗಸ್ಟ್ 15 ರ ಬಳಿಕ ಪತ್ರಿಕಾಗೋಷ್ಠಿ ಕರೆಸಿ ಬಹಿರಂಗಪಡಿಸುವುದಾಗಿ ಅವರು ಹೇಳಿಕೊಂಡಿದ್ದಾರೆ.
ಈ ವಿಷಯವನ್ನು ರಾಜ್ಯಸಭೆಯಲ್ಲೂ ಅವರು ಪ್ರಸ್ತಾಪ ಮಾಡಿದ್ದರು. ಇದಕ್ಕೆ ಕಾಂಗ್ರೆಸ್ಸಿಗರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.
ಗಾಂಧೀಜಿ ದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿಲ್ಲ. ಇದರಿಂದ ಅವರ ಮೇಲೆ ಗೋಡ್ಸೆಯೇ ಗುಂಡು ಹಾರಿಸಿದ್ದಾನೆಯೇ ಅಥವಾ ಇತರರು ಗುಂಡು ಹಾರಿಸಿದ್ದರೆ ಎಂಬುದು ಸ್ಪಷ್ಟವಾಗಿಲ್ಲ. ಅಲ್ಲದೇ ಅವರ ದೇಹದ ಮೇಲೆ ಎಷ್ಟು ಗುಂಡುಗಳ ಗುರುತು ಇತ್ತೆಂಬುದೂ ಇದುವರೆಗೆ ತಿಳಿದುಬಂದಿಲ್ಲ ಎಂದು ಸ್ವಾಮಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.