ಶ್ರೀನಗರ : ಗುಂಡಿನ ಚಕಮಕಿಯ ವೇಳೆ ಜೀವಂತವಾಗಿ ಸೆರೆ ಸಿಕ್ಕ ಪಾಕಿಸ್ಥಾನ ಮೂಲದ ಉಗ್ರ ಬಹುದ್ದೂರ್ ಅಲಿ ಅಲಿಯಾಸ್ ಸೈಫುಲ್ಲಾಹ ಹಲವಾರು ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾನೆ.
ಬಂಧನದ ಬಳಿಕ ರಾಷ್ಟ್ರೀಯ ತನಿಖಾ ತಂಡದ ವಶದಲ್ಲಿರುವ ಈತ ಮುಗ್ಧ ನಾಗರೀಕರನ್ನು ಕೊಲ್ಲುವ ಸಲುವಾಗಿಯೇ ಪಾಕಿಸ್ಥಾನದಿಂದ ಕಾಶ್ಮೀರಕ್ಕೆ ಬಂದಿದ್ದೇನೆ ಎಂದು ವಿಚಾರಣೆ ವೇಳೆ ಹೇಳಿದ್ದಾನೆ.
22 ವರ್ಷದ ಈತ ಲಷ್ಕರ್-ಇ-ತೊಯ್ಬಾ ಸಂಘಟನೆಯಿಂದ ತರಬೇತಿ ಪಡೆದುಕೊಂಡಿದ್ದೇನೆ ಎಂಬುದನ್ನು ಒಪ್ಪಿಕೊಂಡಿದ್ದಾನೆ. ತನಗೆ ಜಮಾತ್ ಉದ್ ದಾವಾದ ಮುಖ್ಯಸ್ಥ ಹಫೀಸ್ ಸೈಯ್ಯದ್ ಎರಡು ಬಾರಿ ಗೆರಿಲ್ಲಾ ಯುದ್ಧ ತಂತ್ರದ ಬಗ್ಗೆ ತರಬೇತಿ ನೀಡಿದ್ದಾನೆ ಎಂದು ಹೇಳಿಕೊಂಡಿದ್ದಾನೆ.
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರು ಸ್ಥಾಪಿಸಿರುವ ಕಂಟ್ರೋಲ್ ರೂಂನೊಂದಿಗೆ ನಿರಂತರ ಸಂಪರ್ಕದಲ್ಲಿದ್ದೆ. ಮತ್ತು ಅದರ ಉಸ್ತುವಾರಿಯಾಗಿರುವ ವಲೀದ್ ತನಗೆ ಸಲಹೆ ಸೂಚನೆಗಳನ್ನು ನೀಡುತ್ತಿದ್ದ ಎಂಬುದಾಗಿ ಈತ ಹೇಳಿದ್ದಾನೆ.
ಜಮ್ಮು ಕಾಶ್ಮೀರದಲ್ಲಿ ಕೆಲ ದಿನಗಳ ಹಿಂದೆ ನಡೆದ ಕಾರ್ಯಾಚರಣೆಯಲ್ಲಿ ಈತ ಸೇನಾಪಡೆಗಳ ಕೈಗೆ ಸೆರೆಸಿಕ್ಕಿದ್ದ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.