ನವದೆಹಲಿ: ಕೇಂದ್ರ ಸರ್ಕಾರ ನಿರ್ಭಯಾ ನಿಧಿಯ ಯೋಜನೆಯಡಿ ಹಿಂಸೆಗೆ ಒಳಗಾದ ಮಹಿಳೆಯರಿಗೆ ವೈದ್ಯಕೀಯ, ಕಾನೂನಾತ್ಮಕ ಹಾಗೂ ಮಾನಸಿಕ ಚಿಕಿತ್ಸೆ ನೀಡಲು ಭಾರತದಾದ್ಯಂತ 660 ಒನ್-ಸ್ಟಾಪ್ ಕೇಂದ್ರಗಳನ್ನು ಸ್ಥಾಪಿಸುವ ಗುರಿ ಹೊಂದಿದೆ ಎಂದು ಲೋಕಸಭೆ ತಿಳಿಸಿದೆ.
ಈ ಯೋಜನೆಯನ್ನು ಎಪ್ರಿಲ್ 1, 2015 ರಂದು ಮೊದಲ ಬಾರಿ ಜಾರಿಗೆ ತರಲಾಗಿದ್ದು, ಮೊದಲ ಹಂತದಲ್ಲಿ 17 ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಈ ಯೋಜನೆ ಮೊದಲ ಹಂತದಲ್ಲಿ ಯಶಸ್ಸು ಕಂಡಿದ್ದು, ಎರಡನೇ ಹಂತದಲ್ಲಿ ಎಪ್ರಿಲ್ 2017 ರ ಒಳಗೆ 150 ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮೇನಕಾ ಗಾಂಧಿ ಹೇಳಿದ್ದಾರೆ.
ಸಂತ್ರಸ್ತ ಮಹಿಳೆಯರಿಗೆ ವೈದ್ಯಕೀಯ ನೆರವು, ಪೊಲೀಸ್ ನೆರವು, ಮಾನಸಿಕ ಚಿಕಿತ್ಸೆ, ತಾತ್ಕಾಲಿಕ ಆಶ್ರಯ ಮುಂತಾದ ಸೇವೆಗಳಿಗಾಗಿ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಜಿಲ್ಲಾಧಿಕಾರಿ ಅಥವಾ ಪೊಲೀಸ್ ಉಪ ಆಯುಕ್ತರ ನೇತೃತ್ವದಲ್ಲಿ ಈ ಕೇಂದ್ರಗಳ ಆಡಳಿತ ವ್ಯವಸ್ಥೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.