ನವದೆಹಲಿ : ಚೀನಾದ ಹಾಂಗ್ ಝೌನಲ್ಲಿ ಸೆಪ್ಟೆಂಬರ್ 4 ಮತ್ತು 5 ರಂದು ನಡೆಯಲಿರುವ ಜಿ-20 ಶೃಂಗ ಸಭೆ ಸಂದರ್ಭದಲ್ಲಿ ಅಮೇರಿಕಾ ಅಧ್ಯಕ್ಷ ಬರಾಕ್ ಒಬಾಮಾ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ.
ಈ ವೇಳೆ ಉಭಯ ನಾಯಕರು ಭಯೋತ್ಪಾದನೆ, ಎನ್ಎಸ್ಜಿ ಸದಸ್ಯತ್ವ ವಿಸ್ತರಣೆ ಹೀಗೆ ಹಲವಾರು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ.
ಆರ್ಥಿಕ ಮತ್ತು ರಕ್ಷಣಾ ಸಂಬಂಧದ ಬಗ್ಗೆಯೂ ಮಾತುಕತೆಗಳು ನಡೆಯಲಿವೆ ಎಂದು ಸೌತ್ ಬ್ಲಾಕ್ ಮೂಲಗಳು ತಿಳಿಸಿವೆ.
ಅಮೇರಿಕಾದ ರಾಷ್ಟ್ರೀಯ ಉಪಭದ್ರತಾ ಸಲಹೆಗಾರ ಅಡ್ವೇಲ್ ವಾಲ್ಲಿ ಅಡೈಮೊ ಅವರು ಎರಡು ದಿನಗಳ ಕಾಲ ನವದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಉಭಯ ನಾಯಕರ ಮಾತುಕತೆಯನ್ನು ಅಂತಿಮಗೊಳಿಸಿದ್ದಾರೆ.
ಅಲ್ಲದೆ ಇವರು ವಿತ್ತ ಸಚಿವ ಅರುಣ್ ಜೇಟ್ಲಿ, ಇಂಧನ ಸಚಿವ ಪಿಯೂಷ್ ಗೋಯಲ್ ಅವರನ್ನೂ ಭೇಟಿಯಾಗಿದ್ದಾರೆ.
ಮೂಲಗಳ ಪ್ರಕಾರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಮುಂದಿನ ತಿಂಗಳು ಅಮೇರಿಕಾಗೆ ತೆರಳಲಿದ್ದು ಅಲ್ಲಿನ ರಕ್ಷಣಾ ಸಚಿವರನ್ನು ಭೇಟಿಯಾಗಲಿದ್ದಾರೆ.
ಈ ವೇಳೆ ಮಹತ್ವದ ರಕ್ಷಣಾ ಒಪ್ಪಂದವೊಂದಕ್ಕೆ ಸಹಿ ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.