ಬೆಂಗಳೂರು : ಅನಾರೋಗ್ಯದ ಸಮಸ್ಯೆಯಿಂದಾಗಿ ನಿಧನರಾದ ರಾಕೇಶ್ ಅವರ ಅಂತ್ಯಕ್ರಿಯೆಯನ್ನು ಮೈಸೂರಿನ ಟಿ. ಕಾಟೂರಿನಲ್ಲಿ ನಡೆಸಲಾಗುವುದೆಂದು ಹೇಳಲಾಗಿದೆ. ಈಗಾಗಲೇ ಅಲ್ಲಿ ತಯಾರಿಗಳು ನಡೆದಿದ್ದು, ಕಾಗಿನೆಲೆ ಸ್ವಾಮೀಜಿ ನೇತೃತ್ವದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆಗಳಾಗುತ್ತಿವೆ ಎನ್ನಲಾಗಿದೆ.
ಬೆಲ್ಜಿಯಂ ಪ್ರವಾಸದಲ್ಲಿರುವ ವೇಳೆ ಅನಾರೋಗ್ಯದ ಸಮಸ್ಯೆಯಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದ ರಾಕೇಶ್ ಸಿದ್ದರಾಮಯ್ಯ ಅವರ ಪಾರ್ಥಿವ ಶರೀರ ಇಂದು ಬ್ರಸೆಲ್ಸ್ನಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿತು. ವಿಮಾನ ನಿಲ್ದಾಣದಲ್ಲಿ ಜಮೀರ್ ಅಹಮ್ಮದ್, ಚೆಲುವರಾಯ ಸ್ವಾಮಿ ಸೇರಿ ಅನೇಕ ಗಣ್ಯರು ಆಗಮಿಸಿದ್ದರು. ತದನಂತರ ವಿಶೇಷ ವಿಮಾನದಲ್ಲಿ ರಾಕೇಶ್ ಅವರ ಪಾರ್ಥಿವ ಶರೀರವನ್ನು ಮೈಸೂರಿಗೆ ಕರೆದೊಯ್ಯಲಾಯಿತು. ಮೈಸೂರು ವಿಮಾನ ನಿಲ್ದಾಣದ ಸುತ್ತಮುತ್ತಲೂ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಮೈಸೂರಿನ ವಸ್ತು ಪ್ರದರ್ಶನ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ಮಧ್ಯಾಹ್ನ 2 ಗಂಟೆಯವರೆಗೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಈಗಾಗಲೇ ಅಂತಿಮ ದರ್ಶನಕ್ಕಾಗಿ ಜನಸಾಗರವೇ ಹರಿದು ಬರುತ್ತಿದೆ ಎನ್ನಲಾಗಿದೆ.
ಮಧ್ಯಾಹ್ನ 2 ರ ನಂತರ ರಾಕೇಶ್ ಅವರ ಪಾರ್ಥಿವ ಶರೀರವನ್ನು ಟಿ. ಕಾಟೂರಿನ ತೋಟದ ಮನೆಗೆ ಕರೆದೊಯ್ಯಲಾಗುವುದು. ನಂತರ ಕಾಗಿನೆಲೆ ಸ್ವಾಮೀಜಿ ಅವರ ನೇತೃತ್ವದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಸ್ಥಳಾವಕಾಶದ ಅಭಾವದಿಂದ ಸಾರ್ವಜನಿಕರಿಗೆ ಅಂತ್ಯಕ್ರಿಯೆಯಲ್ಲಿ ಅವಕಾಶ ನೀಡಲಾಗುವುದಿಲ್ಲ ಎಂದು ಹೇಳಲಾಗಿದೆ. ಕುಟುಂಬ ಸದಸ್ಯರು, ಸಂಬಂಧಿಕರು, ಕೆಲ ಗಣ್ಯರು ಮಾತ್ರ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.