ನವದೆಹಲಿ: ಆಮ್ ಆದ್ಮಿ ಪಕ್ಷದಿಂದ ಹೊರಬಂದಿದ್ದ ಸ್ವರಾಜ್ ಅಭಿಯಾನ್ ನಾಯಕರಾದ ಯೋಗೇಂದ್ರ ಯಾದವ್ ಹಾಗೂ ಪ್ರಶಾಂತ್ ಭೂಷಣ್ ಅವರು ಅಕ್ಟೋಬರ್ 2ರಂದು ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುವುದಾಗಿ ಹೇಳಿದ್ದಾರೆ.
ದೇಶದ 114 ಜಿಲ್ಲೆಗಳ ಕಾರ್ಯನಿರ್ವಾಹಕ ಪ್ರತಿನಿಧಿಗಳ ಶೇ.93ರಷ್ಟು ಅನುಮೋದನೆ ಪಡೆದ ಬಳಿಕ ಪಕ್ಷ ಸ್ಥಾಪಿಸಲು ನಿರ್ಧರಿಸಲಾಗಿದೆ. ಆದರೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಸದ್ಯ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎನ್ನಲಾಗಿದೆ.
ಚುನಾವಣಾ ಆಯೋಗದಲ್ಲಿ ಪಕ್ಷವನ್ನು ಅ.2ರಂದು ನೋಂದಣಿ ಮಾಡಿದ ಬಳಿಕ ಪಕ್ಷದ ಹೆಸರು, ಚಿಹ್ನೆ, ಪದಾಧಿಕಾರಿಗಳ ಹೆಸರನ್ನು ಘೋಷಿಸಲಾಗುವುದು. ಪಕ್ಷ ಸ್ಥಾಪನೆಯ ನಂತರ ಪಕ್ಷ ಮತ್ತು ಸ್ವರಾಜ್ ಅಭಿಯಾನ್ ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲಿವೆ ಎಂದು ಯೋಗೇಂದ್ರ ಯಾದವ್ ಹೇಳಿದ್ದಾರೆ.
ಯಾದವ್ ಹಾಗೂ ಪ್ರಶಾಂತ್ ಭೂಷಣ್ ಅವರನ್ನು ‘ಪಕ್ಷ ವಿರೋಧಿ ಚಟುವಟಿಕೆ’ ನಡೆಸಿದ ಕಾರಣ ಕಳೆದ ವರ್ಷ ಎಪ್ರಿಲ್ನಲ್ಲಿ ಎಎಪಿ ಪಕ್ಷದಿಂದ ತೆಗೆದುಹಾಕಲಾಗಿತ್ತು. ಅವರು ಅರವಿಂದ್ ಕೇಜ್ರಿವಾಲ್ ಅವರ ಸರ್ವೋಚ್ಚ ನಾಯಕತ್ವ ಶೈಲಿ ಹಾಗೂ ಸರ್ಕಾರದಲ್ಲಿ ಪಾರದರ್ಶಕತೆಯ ಕೊರತೆಯನ್ನು ಪ್ರಶ್ನಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.