ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಯ ತಮ್ಮ ಭಾಷಣಕ್ಕೆ ಜನರಿಂದ ಸಲಹೆಗಳನ್ನು ಕೇಳಿದ್ದಾರೆ.
ಭಾನುವಾರ ತಮ್ಮ ರೇಡಿಯೋ ಕಾರ್ಯಕ್ರಮ ಮನ್ ಕೀ ಬಾತ್ನಲ್ಲಿ ಜನರನ್ನುದ್ದೇಶಿಸಿ ಮಾತನಾಡಿದ ಅವರು, ದೇಶದ ಪ್ರಧಾನಿಯೊಬ್ಬರೇ ಕೆಂಪುಕೋಟೆಯಿಂದ ಮಾತನಾಡುತ್ತಾರೆ ಎಂಬುದಾಗಿ ಜನ ತಿಳಿದುಕೊಳ್ಳುವುದು ನನಗಿಷ್ಟವಿಲ್ಲ ಎಂದಿದ್ದಾರೆ.
‘ನಿಮ್ಮ ಮನಸ್ಸಿಗೆ ಏನು ಹೊಳೆಯುತ್ತದೆಯೋ ಅದನ್ನು ನನಗೆ ತಿಳಿಸಿ, ನಿಮ್ಮ ಯೋಚನೆಯನ್ನು ದೇಶದ ಜನರೊಂದಿಗೆ ನಾನು ಹಂಚಿಕೊಳ್ಳುತ್ತೇನೆ’ ಎಂದಿದ್ದಾರೆ.
ಕಳೆದ 2 ವರ್ಷಗಳಿಂದ ಆಗಸ್ಟ್ ೧೫ ರಂದು ಕೆಂಪುಕೋಟೆಯಲ್ಲಿ ಮೋದಿ ಮಾಡುವ ಭಾಷಣ ಭಾರೀ ಖ್ಯಾತಿಯನ್ನು ಪಡೆದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.