ನವದೆಹಲಿ : ಯಾವುದೇ ತರನಾದ ದೌರ್ಜನ್ಯಕ್ಕೀಡಾದ ಶಾಲಾ ಮಕ್ಕಳು ಇನ್ನು ಮುಂದೆ ಆನ್ಲೈನ್ ಮೂಲಕ ಸ್ವಯಂಪ್ರೇರಿತ ಪ್ರಕರಣವನ್ನು ದಾಖಲಿಸಬಹುದಾಗಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವಾಲಯ ಈ ಬಗ್ಗೆ ಕಾರ್ಯೋನ್ಮುಖವಾಗಿದ್ದು, ‘ebox’ (ಇ-ಬಾಕ್ಸ್) ಎಂಬ ಆನ್ಲೈನ್ ಕಂಪ್ಲೈಂಟ್ ಬಾಕ್ಸ್ನ್ನು ಜಾರಿಗೆ ತರಲು ನಿರ್ಧರಿಸಿದೆ. ಇಲ್ಲಿ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ದೂರನ್ನು ದಾಖಲಿಸಬಹುದಾಗಿದೆ.
ಸಚಿವೆ ಮೇನಕಾ ಗಾಂಧಿಯವರು ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅಲ್ಲದೆ ಈ ಯೋಜನೆ ಬಗ್ಗೆ ಪ್ರತಿ ಶಾಲೆಯ ಪ್ರಾಂಶುಪಾಲರಿಗೂ ಮಾಹಿತಿ ಸಿಗುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇಂಟರ್ನೆಟ್ ಎಲ್ಲರಿಗೂ ಲಭ್ಯವಿಲ್ಲದ ಕಾರಣ ಈ ಯೋಜನೆ ಎಷ್ಟು ಯಶಸ್ವಿಯಾಗಬಹುದೆಂಬ ಅನುಮಾನ ಎಲ್ಲರನ್ನೂ ಕಾಡುತ್ತಿದೆ.
ಆದರೆ ಈಗ ಇಂಟರ್ನೆಟ್ ಲಭ್ಯವಿಲ್ಲದಿದ್ದರೂ ಮುಂದೆ ಇದು ಎಲ್ಲರಿಗೂ ಲಭ್ಯವಾಗುತ್ತದೆ ಎಂಬ ಆಶಯದೊಂದಿಗೆ ಈ ಯೋಜನೆಯನ್ನು ಜಾರಿ ಗೊಳಿಸಲಾಗುತ್ತಿದೆ ಎಂದು ಮೇನಕಾ ಹೇಳಿದ್ದಾರೆ.
ಹೆಚ್ಚಿನ ಮಕ್ಕಳು ಲೈಂಗಿಕ ದೌರ್ಜನ್ಯ, ಹಲ್ಲೆ, ನಿಂದನೆಯಂತಹ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ. ಆದರೆ ಇದನ್ನು ಯಾರ ಬಳಿ ಹೇಳಿಕೊಳ್ಳಬೇಕು ಎಂಬ ಗೊಂದಲ ಅವರಲ್ಲಿರುತ್ತದೆ. ಇಂತಹ ಸಂದರ್ಭದಲ್ಲಿ ಇ-ಬಾಕ್ಸ್ ನೆರವಿಗೆ ಬರಲಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.