ಮುಂಬೈ : ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮಹಾರಾಷ್ಟ್ರದಲ್ಲಿ ನಡೆಸಲಾಗುವ ದಹೀ ಹಂಡಿ ಸಮಾರಂಭದಲ್ಲಿ ರಚಿಸಲಾಗುವ ಹ್ಯೂಮನ್ ಪಿರಮಿಡ್ನ ಎತ್ತರದ ಮಿತಿ ಮತ್ತು ಇದರಲ್ಲಿ ಪಾಲ್ಗೊಳ್ಳಲು ಬೇಕಾದ ವಯಸ್ಸಿನ ಮಿತಿಯ ಬಗ್ಗೆ ಈ ಹಿಂದೆ ನೀಡಲಾದ ಆದೇಶಕ್ಕೆ ಸ್ಪಷ್ಟೀಕರಣ ಕೋರಿ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.
2014 ರ ಆಗಸ್ಟ್ 11 ರಂದು ಬಾಂಬೆ ಹೈಕೋರ್ಟ್ ಹ್ಯೂಮನ್ ಪಿರಮಿಡ್ನ ಮಿತಿ 20 ಅಡಿಗಳನ್ನು ಮೀರಬಾರದು ಮತ್ತು 18 ವರ್ಷಕ್ಕಿಂತ ಕೆಳಗಿನ ಮಕ್ಕಳು ಇದರಲ್ಲಿ ಭಾಗವಹಿಸಬಾರದು ಎಂದು ಆದೇಶಿಸಿತ್ತು.
ಸಾಮಾಜಿಕ ಕಾರ್ಯಕರ್ತೆ ಸ್ವಾತಿ ಪಾಟೀಲ್ ಎಂಬುವವರು ಹೈಕೋರ್ಟ್ಗೆ ಮಹಾರಾಷ್ಟ್ರ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಹಾಕಿ ಬಾಂಬೆ ಹೈಕೋರ್ಟ್ ಆದೇಶವನ್ನು ಸರ್ಕಾರ ಉಲ್ಲಂಘಿಸಿದೆ ಎಂದು ಆರೋಪಿಸಿದ್ದರು.
ಅವರ ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಹ್ಯೂಮನ್ ಪಿರಮಿಡ್ ಮಿತಿ ಬಗ್ಗೆ ಸುಪ್ರೀಂ ಕೋರ್ಟ್ನಿಂದ ಸ್ಪಷ್ಟೀಕರಣ ಪಡೆಯುವಂತೆ ಆದೇಶಿಸಿದೆ.
ಈ ಆದೇಶದನ್ವಯ ಮಹಾರಾಷ್ಟ್ರ ಸರ್ಕಾರ ಸ್ಪಷ್ಟೀಕರಣ ಕೋರಿ ಬುಧವಾರ ಸುಪ್ರೀಂಗೆ ಅರ್ಜಿ ಸಲ್ಲಿಸಿದೆ.
ಈ ಅರ್ಜಿಯನ್ನು ಮುಂದಿನ ವಾರ ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.