ಬೆಂಗಳೂರು: ಜಲ ಮಾಲಿನ್ಯದ ವಿರುದ್ಧ ತೀವ್ರ ಟೀಕೆ ಎದುರಿಸುತ್ತಿರುವ ರಾಜ್ಯ ಸರ್ಕಾರ, ಸರ್ಕಾರಿ ಮತ್ತು ಖಾಸಗಿ ಕಂಪೆನಿಗಳಿಂದ ಬೆಂಗಳೂರಿನಲ್ಲಿರುವ ಕೆರೆಗಳ ಅತಿಕ್ರಮಣದ ವ್ಯಾಪ್ತಿಯ ಅಧ್ಯಯನ ನಡೆಸಲು ಸಮಿತಿ ರಚಿಸಿದೆ.
ಸುಮಾರು 11,595 ಎಕರೆ ಕೆರೆ ಪ್ರದೇಶವನ್ನು ಅತಿಕ್ರಮಣ ಮಾಡಲಾಗಿದ್ದು, ಶೇ.50ರಷ್ಟು ಕೊಳಚೆ ನೀರು ಬೆಂಗಳೂರಿನ ಬೆಳ್ಳಂದೂರು ಕೆರೆಗೆ ಹರಿಯುತ್ತಿದೆ. ಬೆಂಗಳೂರು ನಗರದ ಶೇ.2ರಷ್ಟು ನೀರು ಮಾತ್ರ ಶುದ್ಧವಾಗಿದೆ ಎಂದು ಸಮೀಕ್ಷೆಯಿಂದ ತಿಳಿದು ಬಂದಿದೆ.
ಐದನೇ ಒಂದರಷ್ಟು (1/5) ಕೆರೆಗಳ ಭಾಗವನ್ನು ಅತಿಕ್ರಮಣ ಮಾಡಲಾಗಿದ್ದು, ಇದನ್ನು ತೆರವುಗೊಳಿಸಬೇಕಿದೆ ಎಂದು ರಾಜ್ಯ ಸರ್ಕಾರದ ಮೂಲಗಳು ತಿಳಿಸಿವೆ.
ಈ ಮಧ್ಯೆ ಅತಿಕ್ರಮಣಕಾರರು ಕೆಲವು ನ್ಯಾಯಾಲಗಲ ಮೂಲಕ ತಡೆಯಾಜ್ಞೆ ಆದೇಶ ವಿಧಿಸುವಂತೆ ಕೋರಿದ್ದು, ಸಮಸ್ಯೆ ಬಗೆಹರಿಸಲು ಕಾಲಾವಕಾಶ ನೀಡುವಂತೆ ಕೇಳಿಕೊಂಡಿದ್ದಾರೆ.
ಭಾರತೀಯ ವಿಜ್ಞಾನ ಸಂಸ್ಥೆ ಸುಮಾರು 105 ಕೆರೆಗಳ ಸಮೀಕ್ಷೆಯಲ್ಲಿ ಬೆಂಗಳೂರಿನ ಶೇ.45ರಷ್ಟು ಕೊಳಚೆ ನೀರು ಬೆಳ್ಳಂದೂರು ಕೆರೆಗೆ ಹರಿಯುತ್ತಿದೆ ಎಂದು ತಿಳಿದು ಬಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.