ನವದೆಹಲಿ: ಎನ್ಡಿಎ ಸರ್ಕಾರ 70ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ‘ 15 ದಿನಗಳ ಕಾಲ’ ಸ್ವಾತಂತ್ರ್ಯೋತ್ಸವ ಸಮಾರಂಭವನ್ನು ಏರ್ಪಡಿಸಲು ಸಜ್ಜಾಗಿದೆ.
ಇದರ ಅಂಗವಾಗಿ ಆಗಸ್ಟ್ 9 ರಿಂದ 23 ರವರೆಗೆ ದೇಶದಾದ್ಯಂತ ಶಾಲೆಗಳಲ್ಲಿ ವಿವಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಮುಂದಾಗಿದೆ.
ಆಗಸ್ಟ್ 23 ರಂದು ಬೆಳಿಗ್ಗೆ 11 ಗಂಟೆಗೆ ರಾಷ್ಟ್ರಗೀತೆಯ ಸಾಮೂಹಿಕ ಗಾಯನವೂ ಸೇರಿದಂತೆ ದೇಶಭಕ್ತಿ ಹೆಚ್ಚಿಸುವ ಹಲವಾರು ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತಿದೆ.
ಯುವ ಮನಸ್ಸುಗಳಲ್ಲಿ ದೇಶಭಕ್ತಿ, ಸ್ವಾತಂತ್ರ್ಯ ಚಳುವಳಿಯ ಸ್ಫೂರ್ತಿಯನ್ನು ಉದ್ದೀಪನಗೊಳಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ ಎಂದು ಸಚಿವ ಪ್ರಕಾಶ್ ಜಾವ್ಡೇಕರ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.