ಕೊಡಗು : ಭಾರತೀಯ ಸೈನ್ಯದ ಮುಖ್ಯಸ್ಥ ಜನರಲ್ ದಲ್ಬೀರ್ ಸಿಂಗ್ ರಾಜ್ಯದ ಕೊಡಗಿಗೆ ಭೇಟಿ ನೀಡಲಿದ್ದು, ಶನಿವಾರ ಆಗಸ್ಟ್ 6 ರಂದು ಮಾಜಿ ಯೋಧರ ಬೃಹತ್ ಸಮಾವೇಶಕ್ಕೆ ಚಾಲನೆ ನೀಡಲಿದ್ದಾರೆ.
ಮಾಜಿ ಯೋಧರಿಗೆ ಹಾಗೂ ಹುತಾತ್ಮ ಯೋಧರ ಕುಟುಂಬದ ಸದಸ್ಯರಿಗೆ ತಮ್ಮ ಅಹವಾಲುಗಳನ್ನು ಹೇಳಿಕೊಳ್ಳಲು, ಪರಿಹಾರ ಕಂಡುಕೊಳ್ಳಲು ಈ ಸಮಾವೇಶ ಉಪಯುಕ್ತವಾಗಿದ್ದು ಅತ್ಯಧಿಕ ಸಂಖ್ಯೆಯ ಯೋಧರನ್ನು ಹೊಂದಿರುವ ಕೊಡುಗು ಜಿಲ್ಲೆಗೆ ಈ ಕಾರ್ಯಕ್ರಮ ಹೆಚ್ಚು ಲಾಭದಾಯಕವಾಗಲಿದೆ.
ಸೇನಾ ಮುಖ್ಯಸ್ಥರು ಜೊತೆಯಲ್ಲಿ ಅವರ ಪತ್ನಿ ಹಾಗೂ ಇತರ ಹಿರಿಯ ಅಧಿಕಾರಿಗಳು ಕೂಡ ಆಗಮಿಸುತ್ತಿದ್ದು, ಈ ಭಾಗದ ನಿವೃತ್ತ ಯೋಧರ ಪಿಂಚಣಿ, ಆರೋಗ್ಯ, ಕ್ಯಾಂಟೀನ್ ಸೌಲಭ್ಯ, ಇತ್ಯಾದಿಗಳ ಬಗ್ಗೆ ಸಮಸ್ಯೆಗಳನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಹುತಾತ್ಮ ಯೋಧರ ಪತ್ನಿಯರನ್ನು ಸನ್ಮಾನಿಸುವ ಕಾರ್ಯಕ್ರಮ ಕೂಡ ಹಮ್ಮಿಕೊಳ್ಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.