ಕಾಪು : ಪಡುಗ್ರಾಮದ ಲಾಲ್ ಬಹದ್ದೂರ್ ಶಾಸ್ತ್ರಿ ಸ್ಪೋರ್ಟ್ಸ್ ಆಂಡ್ ಕಲ್ಚರಲ್ ಕ್ಲಬ್ನ ೩೭ನೇ ವಾರ್ಷಿಕೋತ್ಸವದ ಪ್ರಯುಕ್ತ ಕಾಪು ಪಡು ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಮೇ ೧ ರಿಂದ ೩ರ ವರೆಗಿನ ಹೊನಲು ಬೆಳಕಿನ ರಾಜ್ಯಮಟ್ಟದ ಪ್ರತಿಷ್ಠಿತ ಆಹ್ವಾನಿತ ತಂಡಗಳ ಪುರುಷರ ಕಬಡ್ಡಿ ಪಂದ್ಯಾಟ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಗೌರವಾಧ್ಯಕ್ಷ ಮಾಜಿ ಶಾಸಕ ಲಾಲಾಜಿ ಮೆಂಡನ್ ಕಾಪು ಪಡು ಶಾಲೆಯಲ್ಲಿ ಶನಿವಾರ ಮಧ್ಯಾಹ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಬೆಂಗಳೂರು, ಉಡುಪಿ ಜಿಲ್ಲಾ ಕಬಡ್ಡಿ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಸಂಸ್ಥೆಯ ಸಹಯೋಗದೊಂದಿಗೆ ಕಬಡ್ಡಿ ಸ್ಪರ್ಧೆ ನಡೆಯಲಿದೆ ಎಂದೂ ಲಾಲಾಜಿ ಮೆಂಡನ್ ಹೇಳಿದ್ದಾರೆ.ಸಾಗರ ಸಂಗಮ-೨೦೧೫ ಕಬಡ್ಡಿ ಪಂದ್ಯಾಟದಲ್ಲಿ ರಾಜ್ಯಮಟ್ಟದ ವೃತ್ತಿಪರ ಹಾಗೂ ಪ್ರತಿಷ್ಠಿತ ೧೬ ತಂಡಗಳು ಲೀಗ್ ಆದಾರದಲ್ಲಿ ಸೆಣೆಸಾಟ ನಡೆಸಲಿದೆ.
ಪ್ರಥಮ ಬಹುಮಾನವಾಗಿ ೧ ಲಕ್ಷ ರೂ ನಗದು ಮತ್ತು ಆತ್ಯಾಕರ್ಷಕ ಟ್ರೋಫಿ ಒಳಗೊಂಡಿದ್ದು, ದ್ವೀತೀಯ ಬಹುಮಾನ ೫೦ ಸಾವಿರ ರೂ ಮತ್ತು ಟ್ರೋಫಿ ಒಳಗೊಂಡಿದೆ.ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಮಾರ್ ಸೊರಕೆ ಹಾಗೂ ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟನೆಯನ್ನು ನೇರವೇರಿಸಲಿದ್ದು, ಸಮಾರಂಭದಲ್ಲಿ ಪ್ರತಿಷ್ಠಿತ ಗಣ್ಯರು ಭಾಗವಹಿಸಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಅಧ್ಯಕ್ಷ ನವೀನ್ ಅಮೀನ್, ಕಿಶೋರ್ ಕುಮಾರ್, ಕುಶ ಸಾಲ್ಯಾನ್, ಶೀಲಾರಾಜ್ ಪುತ್ರನ್, ರಾಜೇಶ್ ಸುವರ್ಣ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.