ಸವಣೂರು : ಆಧುನಿಕತೆಯ ಹೆಸರಿನಲ್ಲಿ ಮೂಲ ಸಂಸ್ಕೃತಿಗೆ ಧಕ್ಕೆಯಾಗುತ್ತಿದೆ. ತುಳುನಾಡಿನ ಸಂಸ್ಕೃತಿಯಲ್ಲಿ ಆಟಿ ತಿಂಗಳು ತನ್ನದೇ ಆದ ವೈಶಿಷ್ಠ್ಯವನ್ನು ಹೊಂದಿದೆ ಎಂದು ಸವಣೂರು ಕ್ಲಸ್ಟರ್ ಸಿಆರ್ಪಿ ವೆಂಕಟೇಶ್ ಅನಂತಾಡಿ ಹೇಳಿದರು. ಅವರು ಸವಣೂರು ಹಿ.ಪ್ರಾ.ಶಾಲೆಯಲ್ಲಿ ನಡೆದ ಆಟಿದ ಗಮ್ಮತ್ ಕಾರ್ಯಕ್ರಮದಲ್ಲಿ ಆಟಿದ ತಿರ್ಲ್ ವಿಷಯದ ಕುರಿತು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಮಳೆ ಬಿಸಿಲಿನ ದ್ವಂದ್ವ ವಾತಾವರಣವಲ್ಲದೆ, ರೋಗ ರುಜಿನಗಳು ಬಾಧಿಸುವ ಜತೆಗೆ ಪ್ರಕೃತಿಯಲ್ಲಿನ ವನಸಿರಿಯ ಔಷಧೀಯ ಗುಣಗಳನ್ನು ವರ್ಧಿಸಿಕೊಳ್ಳುವ ತಿಂಗಳು ಇದಾಗಿದೆ. ನಮ್ಮ ಪೂರ್ವಜನರು ಬಳುವಳಿಯಾಗಿ ನೀಡಿದ ಮಾಹಿತಿಗಳನ್ನು, ಆಚರಣೆಗಳನ್ನು ಆಧುನಿಕತೆಯ ಹೆಸರಿನಲ್ಲಿ ದೂರಮಾಡುತ್ತಿರುವುದು ವಿಷಾದನೀಯ. ಬದಲಾವಣೆಗಳು ಮೂಲ ಸಂಸ್ಕೃತಿಯ ಬೇರುಗಳಿಗೆ ಧಕ್ಕೆಯಾಗಬಾರದು ಎಂದು ವೆಂಕಟೇಶ್ ಹೇಳಿದರು.
ಕಾರ್ಯಕ್ರಮವನ್ನು ಪ್ರಗತಿಪರ ಕೃಷಿಕ ಶಿವರಾಮ ಗೌಡ ಮೆದು ಅವರು ಕಳಸೆಗೆ ಭತ್ತ ಸುರಿಯುವ ಮೂಲಕ ಉದ್ಘಾಟಿಸಿದರು.
ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಅಧ್ಯಕ್ಷತೆ ವಹಿಸಿದ್ದರು .ವೇದಿಕೆಯಲ್ಲಿ ಜಿ.ಪಂ.ಸದಸ್ಯೆ ಪ್ರಮೀಳಾ ಜನಾರ್ಧನ, ತಾ.ಪಂ.ಉಪಾಧ್ಯಕ್ಷೆ ರಾಜೇಶ್ವರಿ ಡಿ.ಕನ್ಯಾಮಂಗಲ, ಸವಣೂರು ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ದಿನೇಶ್ ಮೆದು, ಜನಜಾಗೃತಿ ವೇದಿಕೆಯ ಸವಣೂರು ವಲಯಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಚಂದ್ರ ಶೇಖರ್ ಮೆದು, ಸವಣೂರು ಯುವಕ ಮಂಡಲದ ಉಪಾಧ್ಯಕ್ಷ ಕುಲಪ್ರಕಾಶ್ ಮೆದು, ಕಾರ್ಯದರ್ಶಿ ಸುಬ್ರಹ್ಮಣ್ಯ ಬರೆಪ್ಪಾಡಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಮಾರು 25 ಹೆಚ್ಚು ಆಟಿ ತಿಂಗಳ ವಿವಿಧ ಖಾದ್ಯಗಳನ್ನು ತಯಾರಿಸಲಾಗಿತ್ತು. ಹಳೆಯ ಕಾಲದ ಪರಿಕರಗಳನ್ನು ಪ್ರದರ್ಶಿಸಲಾಯಿತು. ಶಾಲಾ ಮುಖ್ಯಗುರು ಹರಿಶಂಕರ್ ಸ್ವಾಗತಿಸಿ, ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಕೆ.ನಿರೂಪಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.