ಇಟಾನಗರ್: ಅರುಣಾಚಲ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲಿಖೋ ಪುಲ್ ಇಟಾನಗರದ ತಮ್ಮ ನಿವಾಸದಲ್ಲಿ ಸಾವನ್ನಪ್ಪಿರುವುದಾಗಿ ಮೂಲಗಳು ತಿಳಿಸಿವೆ.
ವರದಿಗಳ ಪ್ರಕಾರ ಪುಲ್ ಅವರು ಮಂಗಳವಾರ ಬೆಳಗ್ಗೆ 8-9 ಗಂಟೆ ಸುಮಾರಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಶಂಕಾಸ್ಪದ ರೀತಿಯಲ್ಲಿ ಸಾವನ್ನಪಿದ್ದು, ಆತ್ಮಹತ್ಯೆ ಮಾಡಿರಬಹುದು ಎಂದು ಹೇಳಲಾಗಿದೆ.
ಪುಲ್ ಅವರ ಆಪ್ತ ಸಹಾಯಕರ ಪ್ರಕಾರ ಅವರು ಖಿನ್ನತೆಯಿಂದ ಬಳಲುತ್ತಿದ್ದು, ತನ್ನನ್ನು ಓರ್ವ ಬಹಿಷ್ಕೃತ ವ್ಯಕ್ತಿಯಂತೆ ಕಾಣುತ್ತಿದ್ದ ಬಗ್ಗೆ ಅಸಮಾಧಾನಗೊಂಡಿದ್ದರು ಎಂದು ಹೇಳಲಾಗಿದೆ.
ಕಲಿಖೋ ಪುಲ್ ಅವರು ಫೆಬ್ರವರಿ 2016 ರಿಂದ ನಾಲ್ಕು ತಿಂಗಳ ಕಾಲ ಅರುಣಾಚಲ ಮುಖ್ಯಮಂತ್ರಿಯಾಗಿದ್ದರು. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಅವರು ತಮ್ಮ ಅಧಿಕೃತ ಸರ್ಕಾರಿ ಬಂಗಲೆಯನ್ನು ಇನ್ನಷ್ಟೇ ಖಾಲಿ ಮಾಡಬೇಕಿತ್ತು.
ಕಾಂಗ್ರೆಸ್ನ ಕೆಲವು ಹಿರಿಯ ನಾಯಕರು ಪುಲ್ ಅವರ ನಿವಾಸಕ್ಕೆ ತಲುಪಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.