ಇಂಫಾಲ : ಮಣಿಪುರದ ಉಕ್ಕಿನ ಮಹಿಳೆ ಎಂದೇ ಖ್ಯಾತರಾಗಿರುವ ಮಾನವ ಹಕ್ಕು ಹೋರಾಟಗಾರ್ತಿ ಇರೋಮ್ ಶರ್ಮಿಳಾ ಅವರು ತಮ್ಮ ಸುದೀರ್ಘ ಕಾಲದ ಉಪವಾಸ ಸತ್ಯಾಗ್ರಹವನ್ನು ಇಂದು ಅಂತ್ಯಗೊಳಿಸಲಿದ್ದಾರೆ.
ಕಳೆದ 16 ವರ್ಷಗಳಿಂದ ಮಣಿಪುರದಲ್ಲಿ ಹೇರಲಾಗಿರುವ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರವನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಅವರು ಉಪವಾಸ ನಡೆಸುತ್ತಿದ್ದರು. ಇತ್ತೀಚೆಗಷ್ಟೇ ಅವರು ಉಪವಾಸದ ಹೋರಾಟವನ್ನು ಅಂತ್ಯಗೊಳಿಸಿ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದ್ದರು.
ಇಂದು ನ್ಯಾಯಾಲಯಕ್ಕೆ ಹಾಜರಾದ ಬಳಿಕ ಅವರು ಉಪವಾಸವನ್ನು ತ್ಯಜಿಸುವ ಸಾಧ್ಯತೆಯಿದೆ.
ಕಳೆದ 15 ವರ್ಷದಿಂದ ತನ್ನ ತಾಯಿಯೂ ಸೇರಿದಂತೆ ಯಾವುದೇ ತಮ್ಮ ಕುಟುಂಬ ಸದಸ್ಯರನ್ನು ಭೇಟಿಯಾಗಿರಲಿಲ್ಲ. ಈಗಲಾದರೂ ತನ್ನ ಮಗಳನ್ನು ಭೇಟಿಯಾಗಬಹುದು ಎಂಬ ಭರವಸೆಯನ್ನು ಅವರ ಸಹೋದರ ಮತ್ತು ತಾಯಿ ವ್ಯಕ್ತಪಡಿಸಿದ್ದಾರೆ.
ಶರ್ಮಿಳಾ ಅವರು 2017 ರ ಮಣಿಪುರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ. ಆದರೆ ಕೆಲವೊಂದು ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳು ಅವರು ರಾಜಕೀಯಕ್ಕೆ ಇಳಿಯದಂತೆ ಬೆದರಿಕೆಯೊಡ್ಡುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.