ವಾರಣಾಸಿ : ಅರ್ಧದಲ್ಲಿ ಮಕ್ಕಳು ಶಾಲೆಯನ್ನು ತೊರೆಯದಂತೆ ಸಂಪೂರ್ಣ ಸ್ವಚ್ಛತೆ ಮತ್ತು ಸಂಪೂರ್ಣ ಲಸಿಕೆ ಇರುವಂತೆ ನೋಡಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಯ ಗ್ರಾಮಗಳ ಮುಖ್ಯಸ್ಥರಿಗೆ ತಿಳಿಸಿದ್ದಾರೆ.
ಸ್ವಚ್ಛತೆ, ಸಂಪೂರ್ಣ ಲಸಿಕೆ, ಜಿರೋ ಸ್ಕೂಲ್ ಡ್ರಾಪ್ ಔಟ್ಗಳನ್ನು ಗ್ರಾಮಗಳಲ್ಲಿ ಸಾಧಿಸುವ ನಿಟ್ಟಿನಲ್ಲಿ ಗ್ರಾಮ ಪ್ರಧಾನ್ಗಳು ಕಾರ್ಯೋನ್ಮುಖರಾಗಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ಅಷ್ಟೇ ಅಲ್ಲದೆ, ಹೆಣ್ಣು ಮತ್ತು ಗಂಡು ಮಕ್ಕಳ ನಡುವಿನ ತಾರತಮ್ಯವನ್ನು ಸಂಪೂರ್ಣ ನಿರ್ಮೂಲನೆ ಮಾಡಬೇಕು ಎಂದು ಕರೆ ನೀಡಿದ್ದಾರೆ.
ವಾರಣಾಸಿಯ ಗ್ರಾಮ ಪ್ರಧಾನ್ಗಳ ತಂಡವೊಂದು ದೆಹಲಿ ಆಗಮಿಸಿ ಪ್ರಧಾನಿಯವರನ್ನು ಭೇಟಿಯಾಗಿತ್ತು. ಅಲ್ಲದೆ ತಮ್ಮ ಗ್ರಾಮಗಳಲ್ಲಿ ಹೆಣ್ಣು ಮಗುವಿನ ಜನನವನ್ನು ಗಿಡವನ್ನು ನೆಡುವ ಮೂಲಕ ಸಂಭ್ರಮದಿಂದ ಆಚರಿಸುವ ಇಂಗಿತವನ್ನು ಪ್ರಧಾನಿ ಬಳಿ ವ್ಯಕ್ತಪಡಿಸಿತ್ತು.
ರಾಷ್ಟ್ರ ರಾಜಧಾನಿ ಮತ್ತು ಸಂಸತ್ತಿಗೆ ಭೇಟಿ ನೀಡಿದ ಅನುಭವಗಳನ್ನು ಹಂಚಿಕೊಳ್ಳುವಂತೆ ಮೋದಿ ಈ ತಂಡಕ್ಕೆ ತಿಳಿಸಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.