ತಿರುವನಂತಪುರಂ : ಜನಸಂಘದ ಮುಖಂಡ ದಿವಂಗತ ದೀನ್ದಯಾಳ್ ಉಪಾಧ್ಯಾಯ ಅವರ ಜನ್ಮ ಶತಮಾನೋತ್ಸವ ಆಚರಣೆಯ ಸಲುವಾಗಿ ಬಿಜೆಪಿ ರಾಷ್ಟ್ರೀಯ ಸಮಿತಿ ಮತ್ತು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಸೆಪ್ಟೆಂಬರ್ನಲ್ಲಿ ಕೇರಳದ ಕೋಝಿಕ್ಕೋಡ್ನಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಲಿದ್ದಾರೆ.
ಕೇರಳದಲ್ಲಿ ನಡೆದ ರಾಜ್ಯ ಬಿಜೆಪಿ ಸಭೆ ಬಳಿಕ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಕುಮ್ಮಾನಂ ರಾಜಶೇಖರನ್, ‘ಕೇಂದ್ರ ಸಚಿವರು, ಬಿಜೆಪಿ ಸಿಎಂಗಳು, ಸಂಸದರು, ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ಮುಖಂಡರು, ಹಿರಿಯ ನಾಯಕರು ಮೂರು ದಿನಗಳ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ’ ಎಂದಿದ್ದಾರೆ.
ಸೆಪ್ಟೆಂಬರ್ 23 ರಿಂದ ಸಭೆ ನಡೆಯಲಿದ್ದು, ಮೋದಿ ಸೆಪ್ಟೆಂಬರ್ 24 ಮತ್ತು 25 ರಂದು ಭಾಗವಹಿಸಲಿದ್ದಾರೆ.
ಸೆಪ್ಟೆಂಬರ್ 24 ರಂದು ಕೋಝಿಕ್ಕೋಡ್ನ ಬೀಚ್ ಮೈದಾನದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮೋದಿ ಭಾಷಣ ಮಾಡಲಿದ್ದಾರೆ.
ಇದೇ ವೇಳೆ ಅವರು ದೀನ್ದಯಾಳ್ ಉಪಾಧ್ಯಾಯ ಅವರ ಜನ್ಮಶತಮಾನೋತ್ಸವದ ಆಚರಣೆಗೂ ಚಾಲನೆ ನೀಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.