ನವದೆಹಲಿ: ಕೇಂದ್ರ ಸರ್ಕಾರದ ಜವಾಹರ್ ಲಾಲ್ ನೆಹರು ರಾಷ್ಟ್ರೀಯ ನಗರ ನವೀಕರಣ ಮಿಷನ್ (JNNURM), ರಾಜೀವ್ ಆವಾಸ್ ಯೋಜನೆ (RAY) ಮತ್ತು ಪ್ರಧಾನಮಂತ್ರಿ ಆವಾಸ್ ಯೋಜನೆ-ನಗರ (PMAY-U) ಅಡಿಯಲ್ಲಿ 2 ವರ್ಷದಲ್ಲಿ 2 ಲಕ್ಷ ಮನೆಗಳನ್ನು ನಿರ್ಮಿಸಲಾಗಿದೆ ಎಂದು ಲೋಕಸಭೆ ತಿಳಿಸಿದೆ.
ಕಳೆದ 2 ವರ್ಷಗಳ ಅವಧಿಯಲ್ಲಿ ಕೇಂದ್ರದ ಯೋಜನೆಗಳಡಿ 2,23, 814 ಮನೆಗಳನ್ನು ನಿರ್ಮಿಸಲಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ನಗರ ಸ್ಥಳೀಯ ಸಂಸ್ಥೆಗಳು ಮತ್ತು ವಸತಿ ಮಂಡಳಿಗಳ ಸಹಾಯದಿಂದ ಈ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಾಗುತ್ತಿದೆ ಎಂದು ವಸತಿ ಮತ್ತು ನಗರ ಬಡತನ ನಿರ್ಮೂಲನ ಸಚಿವ ರಾವ್ ಇಂದ್ರಜಿತ್ ಸಿಂಗ್ ಹೇಳಿದ್ದಾರೆ.
ವಸತಿ ಮತ್ತು ನಗರೀಕರಣ ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ಒಳಪಟ್ಟಿದ್ದು, ಕೇಂದ್ರ ಸರ್ಕಾರದ ಯೋಜನೆಗಳು ಬಡ ಕುಟುಂಬದ ಮತ್ತು ಸ್ಲಂ ನಿವಾಸಿಗಳಿಗೆ ಕಡಿಮೆ ವೆಚ್ಚದಲ್ಲಿ ವಸತಿ ಸೌಲಭ್ಯಕ್ಕಾಗಿ ಕೈಗೊಳ್ಳಲಾಗಿದೆ ಎಂದು ಸಿಂಗ್ ಹೇಳಿದ್ದಾರೆ.
JNNURM ಮತ್ತು RAY ಯೋಜನೆಗಳ ಅಡಿಯಲ್ಲಿ 13,86,761 ಮನೆಗಳನ್ನು ಮಂಜೂರು ಮಾಡಲಾಗಿದ್ದು, 10,60,899 ಮನೆಗಳ ನಿರ್ಮಾಣ ಪೂರ್ಣಗೊಂಡಿವೆ. ಅಲ್ಲದೇ PMAY-U ಅಡಿಯಲ್ಲಿ ನಗರದ ಬಡ ಕುಟುಂಬಗಳಿಗೆ 8,54,386 ಮನೆಗಳ ನಿರ್ಮಾಣಕ್ಕೆ ಮಂಜೂರು ಮಾಡಲಾಗಿದೆ.
PMAY-U ಅಡಿಯಲ್ಲಿ 1,770 ಮನೆಗಳನ್ನು ನಿರ್ಮಿಸಲಾಗಿದ್ದು, PMAY-Uನ ಕ್ರೆಡಿಟ್ ಲಿಂಕ್ ಸಬ್ಸಿಡಿ ಯೋಜನೆಯಡಿ 8,004 ಫಲಾನುಭವಿಗಳಿಗೆ ಸಬ್ಸಿಡಿ ದರದಲ್ಲಿ ಬಡ್ಡಿ ನೀಡಲಾಗಿದೆ ಎಂದು ಇಂದ್ರಜಿತ್ ಸಿಂಗ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.