ಗಾಜಿಯಾಬಾದ್ : ಉತ್ತರ ಪ್ರದೇಶದ ಬಿಜೆಪಿ ಹಿರಿಯ ಮುಖಂಡ ಬ್ರಿಜ್ಪಾಲ್ ತೆವತಿಯಾ ಅವರ ಮೇಲೆ ದುಷ್ಕರ್ಮಿಗಳು ಗುರುವಾರ ಸಂಜೆ ಗುಂಡಿನ ದಾಳಿಯನ್ನು ನಡೆಸಿದ್ದಾರೆ.
ಗಾಜಿಯಾಬಾದ್ನಲ್ಲಿ ಅವರು ತನ್ನ ಬೆಂಗಾವಲಿನೊಂದಿಗೆ ತೆರಳುತ್ತಿದ್ದ ವೇಳೆ ಎಕೆ-47 ರೈಫಲ್ನಿಂದ ಅವರ ಮೇಲೆ ಕನಿಷ್ಠ 100 ಸುತ್ತುಗಳ ಗುಂಡನ್ನು ಹಾರಿಸಲಾಗಿದೆ.
ಘಟನೆಯಲ್ಲಿ 49 ವರ್ಷದ ಟಿಯೋಟಿಯಾ ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಇತರ 5 ಮಂದಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುಂಡು ಹಾರಿಸಿದ ಆಗಂತುಕರು ಟಯೋಟ ಫಾರ್ಚುನರ್ ಎಸ್ಯುವಿಯಲ್ಲಿ ಕುಳಿತು ತೆವತಿಯಾ ಅವರು ಪ್ರಯಾಣಿಸುತ್ತಿದ್ದ ಸ್ಕಾರ್ಪಿಯೋ ಮೇಲೆ ಗುಂಡುಗಳನ್ನು ಹಾರಿಸಿದ್ದಾರೆ. ಬಳಿಕ ಅಲ್ಲಿಂದ ಪರಾರಿಯಾಗಿದ್ದಾರೆ.
ದಾಳಿಗೆ ಬಳಸಿದ ಎಕೆ-47 ರೈಫಲ್ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಿಯೋಟಿಯಾ ಅವರು 2012 ರ ಉತ್ತರ ಪ್ರದೇಶ ಚುನಾವಣೆಯಲ್ಲಿ ಮುರದ್ನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.