ಪುತ್ತೂರು: ಇಲ್ಲಿಯ ಸಂತ ಫಿಲೋಮಿನಾ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜನೆಗೆ ಒಳಪಟ್ಟಂತೆ ಶೈಕ್ಷಣಿಕ ವರ್ಷ 2007-08 ರಲ್ಲಿ ಸ್ನಾತಕೋತ್ತರ ಅಧ್ಯಯನವು ಪ್ರಾರಂಭಗೊಂಡಿದ್ದು, ಪ್ರಸ್ತುತ ಆರು ವಿಷಯಗಳಲ್ಲಿ ಅಧ್ಯಯನ ನಡೆಯತ್ತಿದ್ದು, ಕಳೆದ ಡಿಸೆಂಬರ್ ತಿಂಗಳಲ್ಲಿ ವಿವಿಯು ನಡೆಸಿರುವ ಸೆಮಿಸ್ಟರ್ ಪರೀಕ್ಷೆಯ ಎಲ್ಲಾ ವಿಷಯಗಳ ಫಲಿತಾಂಶ ಪ್ರಕಟಗೊಂಡಿದೆ.
ಎಂ.ಎಸ್.ಡಬ್ಲ್ಯೂ ಪ್ರಥಮ ಮತ್ತು ತೃತೀಯ ಸೆಮಿಸ್ಟರ್, ಎಂ.ಕಾಂ. ಪ್ರಥಮ ಮತ್ತು ತೃತೀಯ ಸೆಮಿಸ್ಟರ್, ಎಂ.ಎಸ್ಸಿ. ಕಂಪ್ಯೂಟರ್ ಸೈನ್ಸ್ ಪ್ರಥಮ ಸೆಮಿಸ್ಟರ್ ಮತ್ತು ಎಂ.ಎ. ಅರ್ಥಶಾಸ್ತ್ರ ಪ್ರಥಮ ಸೆಮಿಸ್ಟರ್ನಲ್ಲಿ ಶೇಕಡಾ ನೂರು ಫಲಿತಾಂಶ ಕಂಡುಕೊಂಡಿದೆ.
ಎಂ.ಸ್ಸಿ. ಭೌತಶಾಸ್ತ್ರ ಪ್ರಥಮ ಸೆಮಿಸ್ಟರ್ನಲ್ಲಿ ಶೇಕಡಾ 79 ಮತ್ತು ತೃತೀಯ ಸೆಮಿಸ್ಟರ್ನಲ್ಲಿ ಶೇಕಡಾ 93 ಹಾಗೂ ಎಂ.ಎಸ್ಸಿ. ಗಣಿತಶಾಸ್ತ್ರ ಪ್ರಥಮ ಸೆಮಿಸ್ಟರ್ನಲ್ಲಿ ಶೇಕಡಾ 73 ಮತ್ತು ತೃತೀಯ ಸೆಮಿಸ್ಟರ್ನಲ್ಲಿ ಶೇಕಡಾ 70 ಫಲಿತಾಂಶ ಬಂದಿದೆ. ಒಟ್ಟು ಪರೀಕ್ಷೆಗೆ ಹಾಜರಾದ 329 ವಿದ್ಯಾರ್ಥಿಗಳಲ್ಲಿ 134 ವಿದ್ಯಾರ್ಥಿಗಳು ಉನ್ನತ ಶ್ರೇಣಿ ಮತ್ತು 154 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು, ಕೇಂದ್ರವು ಸರಾಸರಿ ಶೇಕಡಾ 93.31 ಫಲಿತಾಂಶವನ್ನು ಪಡೆದಿದ್ದು, ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಲಿಯೊ ನೊರೊನ್ಹ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮುಖ್ಯಸ್ಥರಾದ ರೆ| ಡಾ| ಆಂಟನಿ ಪ್ರಕಾಶ್ ಮೊಂತೆರೊ ಅತ್ಯುತ್ತಮ ಫಲಿತಾಂಶಕ್ಕೆ ಕಾರಣರಾದ ಪ್ರಾಧ್ಯಾಪಕ ವೃಂದ ಮತ್ತು ವಿದ್ಯಾರ್ಥಿಗಳನ್ನು ಅಭಿನಂದಿಸಿರುತ್ತಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.