ಕೋಲ್ಕತಾ: ಪಶ್ಚಿಮ ಬಂಗಾಳ ಸರ್ಕಾರ ಡಾರ್ಜಿಲಿಂಗ್ ಜಿಲ್ಲೆಯ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಹಾಗೂ ಹದಿಹರೆಯದವರಿಗೆ ತಂಬಾಕು ಮಾರಾಟವನ್ನು ನಿಷೇಧಿಸಿದೆ. ಅಲ್ಲದೇ ನಿಯಮ ಉಲ್ಲಂಘಿಸಿದವರಿಗೆ ರೂ.೨೦೦ ದಂಡವನ್ನೂ ಹೇರಲಿದೆ.
ಸಿಗರೇಟು ಮತ್ತಿತರ ತಂಬಾಕು ಉತ್ಪನ್ನಗಳ ಕಾಯ್ದೆ 2003 (COTPA) ಪ್ರಕಾರ ಗುಡ್ಡ ಪ್ರದೇಶಗಳಲ್ಲಿ ನಿಷೇಧಿಸಲಾಗಿದ್ದು, ಇದೀಗ ಆಡಳಿತ ಇಲಾಖೆ ಎಲ್ಲಾ ಸಾರ್ವಜನಿಕ ಪ್ರದೇಶಗಳಲ್ಲಿ ಸ್ವಾತಂತ್ರ್ಯ ದಿನದಿಂದ ಇದರ ಅನುಷ್ಠಾನವನ್ನು ಆರಂಭಿಸಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅನುರಾಗ್ ಶ್ರಿವಾಸ್ತವ ಹೇಳಿದ್ದಾರೆ.
ಹದಿಹರೆಯದ ಮಕ್ಕಳಿಗೆ, ಕಿರಿಯರಿಗೆ ತಂಬಾಕು ಉತ್ಪನ್ನಗಳ ಮಾರಾಟ ಶಿಕ್ಷಾರ್ಹವಾಗಿದ್ದು, ಶೈಕ್ಷಣಿಕ ಆವರಣಗಳ ೧೦೦ ಮೀಟರ್ ಪ್ರದೇಶದಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ ಎಂದು ಶ್ರಿವಾಸ್ತವ ಹೇಳಿದ್ದಾರೆ.
ಇದು ಕೇವಲ ಸ್ಥಳೀಯರಿಗೆ ಮಾತ್ರವಲ್ಲದೇ ಪ್ರವಾಸಿಗರಿಗೂ ಅನ್ವಯವಾಗಲಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಸಿಗರೇಟ್ ಸೇದುವಂತಿಲ್ಲ. ತಂಬಾಕು ಉತ್ಪಾದಕರು ನಿಯಮಗಳನ್ನ ಪಾಲಿಸಬೇಕು ಹಾಗೂ ಎಚ್ಚರಿಕೆ ಸಂಬಂಧಿತ ಚಿತ್ರಗಳನ್ನು ಹಾಕಬೇಕು ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.