ರಿಯೋ : ರಿಯೋ ಒಲಿಂಪಿಕ್ಸ್ 2016 ರಲ್ಲಿ ಭಾರತ ಕಂಚಿನ ಪದಕವನ್ನು ಗೆದ್ದುಕೊಂಡಿದೆ. ಕುಸ್ತಿ ಪಟು ಸಾಕ್ಷಿ ಮಲಿಕ್ ಅವರು 58 ಕೆ.ಜಿ. ಮಹಿಳಾ ವಿಭಾಗದ ಫ್ರೀ ಸ್ಟೈಲ್ನಲ್ಲಿ ಕಂಚಿನ ಪದಕಕ್ಕೆ ಮುತ್ತಿಟ್ಟು ಇತಿಹಾಸ ಬರೆದಿದ್ದಾರೆ.
ಕುಸ್ತಿಯಲ್ಲಿ ಪದಕ ಗೆದ್ದ ಭಾರತದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ರ್ಕಿಗಿಸ್ಥಾನದ ಐಸುಲು ಟಿನಿಬೇಕೋವಾ ವಿರುದ್ಧ 8-5ರಿಂದ ಗೆಲುವು ಸಾಧಿಸಿ ವನಿತೆಯರ ಕುಸ್ತಿ ವಿಭಾಗದಲ್ಲಿ ಭಾರತಕ್ಕೆ ಚೊಚ್ಚಲ ಒಲಿಂಪಿಕ್ಸ್ ಪದಕ ಗೆದ್ದುಕೊಟ್ಟ ಕೀರ್ತಿ ಸಾಕ್ಷಿ ಅವರದ್ದು.
2014 ರ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಸಾಕ್ಷಿ ದೋಹಾ ಏಷ್ಯನ್ ಚಾಂಪಿಯನ್ಶಿಪ್ನಲ್ಲಿ ಕಂಚು ಗೆದ್ದು ಕೊಂಡಿದ್ದರು.
ಸಾಕ್ಷಿ ಪದಕ ಗೆಲ್ಲುತ್ತಿದ್ದಂತೆ ಹರಿಯಾಣದಲ್ಲಿನ ಅವರ ನಿವಾಸದಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.
ಪದಕ ಗೆದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಾಕ್ಷಿ ಕಳೆದ 12 ವರ್ಷಗಳಿಂದ ಈ ಕ್ಷಣಕ್ಕಾಗಿ ನಾನು ಕಾಯುತ್ತಿದ್ದೆ. ದಿನದ ಪ್ರತಿ ಗಂಟೆಯೂ ಅಭ್ಯಾಸದಲ್ಲಿ ನಾನು ತೊಡಗಿಕೊಂಡಿದ್ದೆ. ನನ್ನನ್ನು ಬೆಂಬಲಿಸಿದ ಸಮಸ್ತ ಭಾರತೀಯರಿಗೂ ಧನ್ಯವಾದ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಸಾಕ್ಷಿಗೆ ಅಭಿನಂದನೆ ಸಲ್ಲಿಸಿದ್ದು, ರಕ್ಷಾಬಂಧನದ ಶುಭ ಸಂದರ್ಭದಲ್ಲಿ ಭಾರತದ ಪುತ್ರಿ ಪದಕವನ್ನು ಗೆದ್ದುಕೊಂಡಿದ್ದಾಳೆ. ಇದು ಭಾರತೀಯರಾದ ನಮಗೆಲ್ಲರಿಗೂ ಹೆಮ್ಮೆಯ ವಿಷಯ. ಇತಿಹಾಸವನ್ನು ಬರೆದ ಸಾಕ್ಷಿಯವರಿಗೆ ಅಭಿನಂದನೆಗಳು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.