ರಿಯೋ : ಭಾರತದ ಭರವಸೆಯ ಆಟಗಾರ್ತಿ ಪಿ.ವಿ.ಸಿಂಧು ಅವರು ರಿಯೋ ಒಲಿಂಪಿಕ್ಸ್ನ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಫೈನಲ್ಗೆ ಪ್ರವೇಶಿಸುವ ಮೂಲಕ ಇತಿಹಾಸವನ್ನು ನಿರ್ಮಿಸಿದ್ದಾರೆ.
ಗುರುವಾರ ನಡೆದ ಪಂದ್ಯದಲ್ಲಿ 6 ನೇ ವಿಶ್ವ ಶ್ರೇಯಾಂಕಿತ ಆಟಗಾರ್ತಿ ಜಪಾನಿನ ನೊಝೋಮಿ ಒಕುಹಾರಾ ಅವರನ್ನು 21-19, 21-10 ಅಂಕಗಳಿಂದ ಸೋಲಿಸಿದ ಸಿಂಧು ಫೈನಲ್ಗೆ ಲಗ್ಗೆ ಇಟ್ಟರು. ಈ ಮೂಲಕ ಭಾರತಕ್ಕೆ ಚಿನ್ನ ಅಥವಾ ಬೆಳ್ಳಿ ಪದಕವನ್ನು ಖಚಿತಗೊಳಿಸಿದ್ದಾರೆ.
ಗೆಲುವಿನ ಬಳಿಕ ಮಾತನಾಡಿದ ಸಿಂಧು, ಫೈನಲ್ ಅತ್ಯಂತ ಕಠಿಣವಾಗಿದ್ದು ವಿಶ್ವ ನಂ. 1 ಆಟಗಾರ್ತಿ ಕ್ಯಾರೊಲಿನ್ ಮರಿನ್ ಅವರು ಎದುರಾಳಿಯಾಗಿದ್ದಾರೆ. ಉತ್ತಮ ಪ್ರದರ್ಶನ ನೀಡುವ ಮೂಲಕ ಚಿನ್ನ ಗೆಲ್ಲುವ ಭರವಸೆ ನನಗಿದೆ ಎಂದಿದ್ದಾರೆ.
ಸಿಂಧು ಅವರಿಗೆ ಟ್ವಿಟರ್ ಮೂಲಕ ಅನೇಕ ಗಣ್ಯರು, ಬಾಲಿವುಡ್ ತಾರೆಯರು, ಅಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ‘ನೀನು ಭಾರತ ಹೆಮ್ಮೆ ಪಡುವಂತಹ ಕಾರ್ಯ ಮಾಡಿದ್ದೀಯ, ಅಭಿನಂದನೆಗಳು’ ಎಂದಿದ್ದಾರೆ.
ರಾಷ್ಟ್ರಪತಿಯವರು ಸಿಂಧುಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಶುಕ್ರವಾರ ಸಿಂಧು ಮತ್ತು ಮರಿನ್ ನಡುವೆ ಫೈನಲ್ ಪಂದ್ಯ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.