ಬಂಟ್ವಾಳ: ಇಲ್ಲಿನ ಉಳಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಒಟ್ಟು 95 ಲಕ್ಷ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ರಾಜ್ಯ ಅರಣ್ಯ ಸಚಿವ ಬಿ.ರಮಾನಾಥ ರೈ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಸರಕಾರಿ ಜಾಗದಲ್ಲಿ ಮನೆಕಟ್ಟಿ ವಾಸಿಸುತ್ತಿರುವವರಿಗೆ 94ಸಿ ಯಲ್ಲಿ ಶೀಘ್ರ ಹಕ್ಕುಪತ್ರ ವಿತರಿಸಲಾಗುವುದು ಎಂದು ಹೇಳಿದರು. ಉಳಿ ಗ್ರಾಮ ಇಂದು ಹೆಚ್ಚಿನ ಅಭಿವೃದ್ಧಿ ಸಾಧಿಸಿದೆ. ಕಳೆದ 20 ವರ್ಷಗಳಲ್ಲಿ ಗ್ರಾಮಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಹೇಳಿದ ಅವರು, ವಗ್ಗ-ಉಳಿ ರಸ್ತೆಯನ್ನು ಸುಮಾರು ೫ ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳಿಸಲಾಗುವುದು ಎಂದರು.
ಈ ವೇಳೆ ಅವರು ಬೋಳ್ಯ- ಪುಲ್ಲೇರಿಯಲ್ಲಿ ನೀರು ಸರಬರಾಜು ಸೌಲಭ್ಯ ಹಾಗೂ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿದರು. ಮಲ್ಲೇರಿ-ಬಳ್ಳಿ ರಸ್ತೆ, ಕಕ್ಯ – ಊರಿಂಜ ರಸ್ತೆ, ಗಾಣದಕೊಟ್ಯ- ಅಂತರ ರಸ್ತೆ, ಲಿಂಗೊಟ್ಟು ರಸ್ತೆ, ಕೇವಾಜೆ-ಕೊಂಗುಜೆ ರಸ್ತೆ, ಉರ್ಕಿ ರಸ್ತೆ, ಕಕ್ಯ- ಆಯರ್ಮಾರ್ ರಸ್ತೆ, ಮೇಗಿನಅಗ್ಪಲ, ಕೆಳಗಿನ ಅಗ್ಪಲ ರಸ್ತೆ, ಮೈರ ರಸ್ತೆ, ಮಾರೋಡಿ- ಬಿತ್ತ ರಸ್ತೆ, ಗುಡ್ಡಬೆಟ್ಟು ರಸ್ತೆ, ಅಭಿವೃದ್ಧಿಗೊಂಡ ಉಳಿಬಲು ಅಂಗನವಾಡಿ ಕೇಂದ್ರ, ಗುಡ್ಡಬೆಟ್ಟು ಅಂಗನವಾಡಿ ಕೇಂದ್ರ, ಬೋಳ್ಯ ಅಂಗನವಾಡಿ ಕೇಂದ್ರಗಳನ್ನು ಉದ್ಘಾಟಿಸಿದರು.
ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಕೆ. ಮಾಯಿಲಪ್ಪ ಸಾಲಿಯಾನ್, ಅರಣ್ಯಾಧಿಕಾರಿ ಸುಬ್ರಹ್ಮಣ್ಯ ರಾವ್, ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯನ್ ಮಿರಾಂದ, ಸದಸ್ಯರಾದ ಬಿ.ಪದ್ಮಶೇಖರ ಜೈನ್, ಸಂಪತ್ಕುಮಾರ್ ಶೆಟ್ಟಿ, ಗ್ರಾ.ಪಂ.ಉಪಾಧ್ಯಕ್ಷೆ ಕಮಲಾಕ್ಷಿ, ಸದಸ್ಯರಾದ ಅಬ್ದುಲ್ ರಹಿಮಾನ್, ಸಂಜೀವ ಗೌಡ ಅಗ್ಪಲ, ಸಂಜೀವ ಶೆಟ್ಟಿ , ವೀರೇಂದ್ರ ಕುಮಾರ್ ಜೈನ್, ಪ್ರಮುಖರಾದ ವಿಶ್ವನಾಥ ಸಾಲಿಯಾನ್ ಬಿತ್ತ, ಇಂಜಿನಿಯರ್ಗಳಾದ ಕೃಷ್ಣ, ನರೇಂದ್ರಬಾಬು ಮತ್ತಿತರರು ಉಪಸ್ಥಿತರಿದ್ದರು.
ಗ್ರಾ.ಪಂ.ಅಧ್ಯಕ್ಷ ಎ.ಚೆನ್ನಪ್ಪ ಸಾಲಿಯಾನ್ ಅವರು ಸ್ವಾಗತಿಸಿದರು. ಪಂ.ಅ.ಅಧಿಕಾರಿ ಶ್ರೀಧರ್ ವಂದಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.