ನವದೆಹಲಿ: ಭಾರತದ ವಿಶ್ವ ನಂ.1 ಆಲ್ರೌಂಡರ್ ರವಿಚಂದ್ರನ್ ಅಶ್ವಿನ್ ಇತ್ತೀಚೆಗೆ ವೆಸ್ಟ್ ಇಂಡೀಸ್ನಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ 6ನೇ ಸರಣಿಶ್ರೇಷ್ಠ ಪ್ರಶಸ್ತಿ ಗೆಲ್ಲುವ ಮೂಲಕ ಹೊಸ ದಾಖಲೆ ಬರೆದ್ದಾರೆ.
ಆಫ್ ಸ್ಪಿನ್ನರ್ ಆಗಿರುವ ಅಶ್ವಿನ್ ಈ ಸಾಧನೆ ಮಾಡುವ ಮೂಲಕ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್, ವಿರೇಂದ್ರ ಸೇಹ್ವಾಗ್, ರಾಹುಲ್ ದ್ರಾವಿಡ್, ಸೌರವ್ ಗಂಗೂಲಿ ಹಾಗೂ ಕಪಿಲ್ ದೇವ್ ಅವರನ್ನು ಹಿಂದಿಕ್ಕಿ ಈ ದಾಖಲೆ ಮಾಡಿದ್ದಾರೆ.
ವೆಸ್ಟ್ ಇಂಡೀಸ್ನಲ್ಲಿ ಅಶ್ವಿನ್ ತೋರಿದ ಆಲ್ರೌಂಡ್ ಆಟಕ್ಕಾಗಿ ಅವರಿಗೆ ಸರಣಿಶ್ರೇಷ್ಠ ಪ್ರಶಸ್ತಿ ಗೌರವ ನೀಡಲಾಯಿತು.
ಅಶ್ವಿನ್ ಕೇವಲ 36 ಟೆಸ್ಟ್ ಹಾಗೂ 13 ಸರಣಿಗಳಲ್ಲಿ ಈ ಸಾಧನೆ ಮಾಡಿದ್ದು, ಬಹು ಬೇಗನೇ ಈ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಸಚಿನ್ ಟೆಂಡುಲ್ಕರ್ (74), ವಿರೇಂದ್ರ ಸೆಹ್ವಾಹ್ (39) 5 ಬಾರಿ ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.
ವಿಶ್ವ ಆಟಗಾರರಾದ ಮಾಲ್ಕಮ್ ಮಾರ್ಷಲ್ (21 ಸರಣಿ), ಕರ್ಟ್ಲಿ ಅಂಬ್ರೋಸ್ (27), ಸ್ಟೀವ್ ವಾ (54) 5 ಸರಣಿಶ್ರೇಷ್ಠ ಪ್ರಶಸ್ತಿ ಗೆದ್ದುಕೊಂಡಿದ್ದು, ಅವರನ್ನೂ ಅಶ್ವಿನ್ ಹಿಂದಿಕ್ಕಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.