ಚೆನ್ನೈ : ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ತನ್ನ ರಾಜ್ಯದ ಉನ್ನತ ವ್ಯಾಸಂಗ, ಶಾಲಾ ಶಿಕ್ಷಣಕ್ಕೆ ಸಂಬಂಧಿಸಿದಂತೆ ಒಟ್ಟು 500 ಕೋಟಿ ರೂ. ಮೊತ್ತದ ಯೋಜನೆಯನ್ನು ಘೋಷಿಸಿದ್ದಾರೆ.
ವಿಧಾನಸಭೆಯಲ್ಲಿ ಸ್ವಯಂಪ್ರೇರಿತ ಹೇಳಿಕೆ ನೀಡಿದ ಅವರು ಎಲ್ಲಾ ವಿಶ್ವವಿದ್ಯಾನಿಲಯಗಳ ಮತ್ತು ಅದರ ಅಧೀನಕ್ಕೊಳಪಟ್ಟ ಕಾಲೇಜುಗಳನ್ನು ಪರಸ್ಪರ ಲಿಂಕ್ ಮಾಡುವ ಸಲುವಾಗಿ ಕೇಂದ್ರಗಳನ್ನು ಸ್ಥಾಪಿಸುವುದಾಗಿ ಅವರು ಘೋಷಿಸಿದ್ದಾರೆ.
ಇದರ ಮೂಲಕ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಹಲವು ವಿಧದ ಸೇವೆಗಳನ್ನು ನೀಡಲು ಅವರು ಮುಂದಾಗಿದ್ದಾರೆ.
ಅಣ್ಣಾ ಯುನಿವರ್ಸಿಟಿ ಆವರಣದಲ್ಲಿ ಸುಮಾರು 160 ಕೋಟಿ ರೂ. ವೆಚ್ಚದಲ್ಲಿ ಈ ಕೇಂದ್ರವೊಂದು ಸ್ಥಾಪನೆಯಾಗಲಿದೆ.
ಆಟೋಮೊಬೈಲ್ಗಳು ವ್ಯಯಿಸುವ ಇಂಧನ, ಎಮಿಷನ್ ಮಿಟಿಗೇಷನ್ ಬಗೆಗಿನ ಸಂಶೋಧನೆಗೆ ಅನುಕೂಲವಾಗುವಂತೆ ಮೋಟಾರ್ ವೆಹಿಕಲ್ ಟೆಕ್ನಿಕಲ್ ಸೆಂಟರ್ ಅನ್ನು ಸ್ಥಾಪಿಸುವುದಾಗಿ ಅವರು ಘೋಷಿಸಿದ್ದಾರೆ.
50 ಕೋಟಿ ರೂ. ವೆಚ್ಚದಲ್ಲಿ 5 ಸಾವಿರ ಜನ ಸಾಮರ್ಥ್ಯದ ಆಡಿಟೋರಿಯಂ ಸ್ಥಾಪಿಸುವುದಾಗಿಯೂ ಅವರು ಘೋಷಿಸಿದ್ದಾರೆ.
ಭಾರತೀಯ ಇಂಜಿನಿಯರಿಂಗ್ ಸೇವಾ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಚೆನ್ನೈ, ಧರ್ಮಪುರಿಗಳಲ್ಲಿ ತರಬೇತಿ ಕೇಂದ್ರ ಆರಂಭಿಸುವುದಾಗಿ ತಿಳಿಸಿದ್ದಾರೆ.
100 ಸರ್ಕಾರಿ ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು 15 ದಿನಗಳ ಕಾಲ ವಾರ್ಷಿಕವಾಗಿ ವಿದೇಶಿ ಪ್ರವಾಸಕ್ಕೆ ಕರೆದೊಯ್ಯುವ ಯೋಜನೆಯನ್ನೂ ಅವರು ಆರಂಭಿಸುವುದಾಗಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.