ನವದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ, ಹಿಂಸೆ ಮತ್ತು ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಾಲ್ವರು ಅಪರಾಧಿಗಳಲ್ಲಿ ಓರ್ವ ಅಪರಾಧಿ ವಿನಯ್ ಶರ್ಮಾ ಬುಧವಾರ ತಿಹಾರ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸಂಭವಿಸಿದೆ.
ಜಿಮ್ ಬೋಧಕ ಶರ್ಮಾ ನೋವು ನಿವಾರಕ ಮಾತ್ರೆ ನುಂಗಿದ ಬಳಿಕ ಟವೆಲ್ ಬಳಸಿ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ತಿಳಿದು ಬಂದಿದೆ.
ಮೂಲಗಳ ಪ್ರಕಾರ ವಿನಯ್ ಶರ್ಮಾನನ್ನು ದೀನ್ ದಯಾಳ್ ಆಸ್ಪತ್ರೆಯ ತುರ್ತು ನಿಗಾ ಘಟಕಕ್ಕೆ ಸೇರಿಸಲಾಗಿದ್ದು, ಪ್ರಾಣಾಪಾಯದಿಂದ ದೂರವಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಇತರ ಅಪರಾಧಿಗಳೊಂದಿಗೆ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುಬವ ವಿನಯ್ ಮೇಲೆ ಸಹ ಖೈದಿಗಳು ಹಲ್ಲೆ ನಡೆಸಿದ್ದು, ಹೆಚ್ಚಿನ ಭದ್ರತೆ ನೀಡುವಂತೆ ವಿನಯ್ ಶರ್ಮಾ ಈ ಹಿಂದೆ ಕೇಳಿಕೊಂಡಿದ್ದನು.
ಪ್ರಕರಣಕ್ಕೆ ಸಂಬಂಧಿಸಿದ ಮತ್ತೋರ್ವ ಅಪರಾಧಿ ರಾಮ್ ಸಿಂಗ್ ಮಾರ್ಚ್ 2013ರಲ್ಲಿ ತಿಹಾರ್ ಜೈಲಿನಲ್ಲಿ ಆತ್ಮಹ್ಯತ್ಯೆಗೆ ಶರಣಾಗಿದ್ದನು.
ವಿನಯ್ ಶರ್ಮಾ ಹಾಗೂ ಇತರ ಮೂವರು ಅಪರಾಧಿಗಳು ಮರಣದಂಡನೆ ಶಿಕ್ಷೆ ವಿರುದ್ಧ ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.