ಕಾಬೂಲ್ : ಆಪ್ಘಾನ್ ರಾಜಧಾನಿ ಕಾಬೂಲ್ನಲ್ಲಿರುವ ಅಮೇರಿಕಾ ವಿಶ್ವವಿದ್ಯಾನಿಲಯದ ಮೇಲೆ ಉಗ್ರರು ದಾಳಿ ನಡೆಸಿದ್ದು, ಓರ್ವ ಬಲಿಯಾಗಿದ್ದಾನೆ. 26 ಮಂದಿ ಗಾಯಗೊಂಡಿದ್ದಾರೆ.
ಬರೋಬ್ಬರಿ 10 ಗಂಟೆಗಳ ಸೆಣಸಾಟದ ಬಳಿಕ ಭದ್ರತಾ ಪಡೆಗಳು ಇಬ್ಬರು ದಾಳಿಕೋರರನ್ನು ಬಂಧಿಸಿದೆ. ಈ ದಾಳಿಯ ಹೊಣೆಯನ್ನು ಯಾವುದೇ ಉಗ್ರ ಸಂಘಟನೆಗಳು ಇದುವರೆಗೆ ಹೊತ್ತುಕೊಂಡಿಲ್ಲ.
ಆದರೆ ತಾಲಿಬಾನ್ ಈ ಕೃತ್ಯ ಎಸಗಿರಬಹುದು ಎಂಬ ಶಂಕೆ ಇದೆ.
ಇಬ್ಬರು ದಾಳಿಕೋರರನ್ನು ಹತ್ಯೆ ಮಾಡಿದ ಬಳಿಕ ಗುಂಡಿನ ಚಕಮಕಿ ಕೊನೆಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬುಧವಾರ ಸಂಜೆ ಉಗ್ರರು ವಿಶ್ವವಿದ್ಯಾನಿಲಯದೊಳಕ್ಕೆ ನುಸುಳಿದ್ದು, ರಾತ್ರಿ ಪೂರ್ತಿ ಕಾರ್ಯಾಚರಣೆ ನಡೆಸಲಾಗಿತ್ತು. ಈ ವೇಳೆ ನೂರಾರು ಸಂಖ್ಯೆಯ ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ.
ಕೆಲವು ವಿದ್ಯಾರ್ಥಿಗಳು ಪಿಠೋಪಕರಣಗಳ ಹಿಂದೆ ಅವಿತು ಜೀವ ರಕ್ಷಿಸಿಕೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಈ ಕೃತ್ಯವನ್ನು ಅಮೇರಿಕಾ ಸೆನೆಟ್, ಭಾರತ ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.