ನವದೆಹಲಿ: ದ್ರೋನ್ ಬಳಸಿ ಲಷ್ಕರ್-ಇ-ತೋಯ್ಬಾ ಮತ್ತು ಜೈಶೇ ಮೊಹಮ್ಮದ್ ಉಗ್ರ ಸಂಘಟನೆಗಳು ರಾಷ್ಟ್ರ ರಾಜಧಾನಿ ಮೇಲೆ ದಾಳಿ ನಡೆಸುವ ಸಂಚು ರೂಪಿಸುತ್ತಿವೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ಈ ಹಿನ್ನಲೆಯಲ್ಲಿ ದೆಹಲಿಯಲ್ಲಿ ಯಾರೊಬ್ಬರೂ ಮಾನವ ರಹಿತ ಏರಿಯಲ್ ಏರ್ಕ್ರಾಫ್ಟ್ಗಳನ್ನು ಹಾರಿಸದಂತೆ ನೋಡಿಕೊಳ್ಳಬೇಕು ಎಂದು ದೆಹಲಿ ಪೊಲೀಸರಿಗೆ ಸೂಚನೆ ನೀಡಲಾಗಿದೆ.
ಬಾಡಿಗೆಗೆ ಮನೆ ಮಾಡಿಕೊಂಡಿರುವವ ಬಗ್ಗೆಯೂ ನಿಗಾ ವಹಿಸುವಂತೆ ಸೂಚಿಸಲಾಗಿದೆ.
ಇನ್ನೊಂದೆಡೆ ಫರಿದಾಬಾದ್ನ ಬಸ್ಸ್ಟ್ಯಾಂಡ್ವೊಂದನ್ನು ಉಡಾಯಿಸುವುದಾಗಿ ಲಷ್ಕರ್-ಇ-ತೋಯ್ಬಾ ಸಂಘಟನೆಯೆಂದು ನಮೋದಿಸಿರುವ ಕೈಬರಹವುಳ್ಳ ಬೆದರಿಕೆ ಪತ್ರವೊಂದು ದೊರೆತಿದೆ. ಈ ಪತ್ರದ ಸತ್ಯಾಸತ್ಯತೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.