ನವದೆಹಲಿ : ಸಚಿವ ಸಂಪುಟದಲ್ಲಿ ತೆಗೆದುಕೊಳ್ಳಲಾದ ನಿರ್ಧಾರಗಳು ಸಮರ್ಪಕವಾದ ರೀತಿಯಲ್ಲೇ ಅನುಷ್ಠಾನಗೊಳ್ಳುತ್ತಿದೆಯೇ ಎಂಬುದನ್ನು ತಿಳಿಯಲು ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದಾರೆ.
ಸಂಪುಟ ಪುನರ್ರಚನೆ ಬಳಿಕ ಶುಕ್ರವಾರ ನಡೆದ ಮೊದಲ ಸಭೆಯಲ್ಲಿ ಅಧಿಕಾರಿಗಳು ಸಂಪುಟದಲ್ಲಿ ತೆಗೆದುಕೊಳ್ಳಲಾದ ನಿರ್ಧಾರದ ವಾಸ್ತವಿಕ ಪ್ರಭಾವದ ಬಗ್ಗೆ ವಿಸ್ತೃತ ವಿವರಣೆಯನ್ನು ನೀಡಿದ್ದಾರೆ.
ಒಟ್ಟು ಮೂರೂವರೆ ಗಂಟೆಗಳ ಕಾಲ ಈ ಸಭೆ ನಡೆದಿದೆ.
ಮೋದಿ ಕೂಡಾ ನಿರ್ಧಾರಗಳು ಅದು ಇರಬೇಕಾದ ರೀತಿಯಲ್ಲೇ ಅನುಷ್ಠಾನಗೊಳ್ಳುತ್ತಿದೆಯೇ ಎಂಬುದನ್ನು ಇಲ್ಲಿ ತಿಳಿಯಲು ಮುಂದಾದರು.
ಸಂಪುಟ ಕಾರ್ಯದರ್ಶಿ ಪಿ. ಕೆ. ಸಿನ್ಹಾ ಸೇರಿದಂತೆ ಹಲವು ಅಧಿಕಾರಿಗಳು ಈ ಬಗ್ಗೆ ವಿವರಣೆಗಳನ್ನು ನೀಡಿದ್ದಾರೆ.
ಸ್ವಾತಂತ್ರ್ಯ ದಿನದ ಅಂಗವಾಗಿ ನಡೆಸಲಾದ ತಿರಂಗಾ ಯಾತ್ರೆಯ ಬಗ್ಗೆಯೂ ವಿವರಣೆ ನೀಡಲಾಗಿದೆ.
ಯಾತ್ರೆಯಲ್ಲಿ ಯಾವ ಯಾವ ಸಚಿವರು ಭಾಗವಹಿಸಿದ್ದಾರೆ. ಪಾಲ್ಗೊಂಡ ಜನರ ಸಂಖ್ಯೆ ಮುಂತಾದವುಗಳ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ.
ಒಲಿಂಪಿಕ್ ಟಾಸ್ಕ್ ಫೋರ್ಸ್ ರಚಿಸುವ ನಿರ್ಧಾರವನ್ನೂ ಇಲ್ಲೇ ಕೈಗೊಳ್ಳಲಾಯಿತು.
ಕಳೆದ ಡಿಸೆಂಬರ್ನಲ್ಲಿ ಕಾರ್ಯದರ್ಶಿಗಳ ಸಮಿತಿ ಅಂತಿಮಗೊಳಿಸಿದ 8 ಥೀಮ್ಗಳ ಪರಿಶೀಲನೆಯನ್ನು ನಡೆಸಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.