ನವದೆಹಲಿ : ಕುಸ್ತಿಪಟು ಯೋಗೇಶ್ವರ್ ದತ್ ಅವರು ಲಂಡನ್ ಒಲಿಂಪಿಕ್ಸ್ನಲ್ಲಿ ಗೆದ್ದಕೊಂಡ ಕಂಚಿನ ಪದಕ ಬೆಳ್ಳಿ ಪದಕವಾಗಿ ಅಪ್ಗ್ರೇಡ್ ಆಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಯೋಗೇಶ್ವರ್ ಅವರನ್ನು ಸೋಲಿಸಿ ಈ ಒಲಿಂಪಿಕ್ನಲ್ಲಿ ಬೆಳ್ಳಿ ಗೆದ್ದಿದ್ದ ರಷ್ಯಾದ ಬೆಸಿಕ್ ಕುಡ್ಕೋವ್ ಅವರು ನಿಷೇಧಿತ ದ್ರವ್ಯವನ್ನು ಸೇವಿಸಿದ್ದುದು ಖಚಿತವಾದ ಹಿನ್ನಲೆಯಲ್ಲಿ ಅವರ ಪದಕ ರದ್ದಾಗುವ ಸಾಧ್ಯತೆ ಇದೆ.
4 ಬಾರಿ ವಿಶ್ವ ಚಾಂಪಿಯನ್, 2 ಬಾರಿ ಒಲಿಂಪಿಕ್ ಪದಕ ಗೆದ್ದಿದ್ದ ಕುಡ್ಕೋವ್ ಅವರು 2013 ರಲ್ಲಿ ಕಾರು ಅಪಘಾತದಲ್ಲಿ ಮೃತರಾಗಿದ್ದಾರೆ.
ವರ್ಲ್ಡ್ ಆಂಟಿ ಡೋಪಿಂಗ್ ನಡೆಸಿದ ಪರೀಕ್ಷೆಯಲ್ಲಿ ಅವರು ಉತ್ತೇಜಕವನ್ನು ಸೇವನೆ ಮಾಡಿರುವುದು ಖಚಿತವಾಗಿದೆ. ಹೀಗಾಗಿ 60 ಕೆ.ಜಿ. ಫ್ರೀಸ್ಟೈಲ್ ವಿಭಾಗದಲ್ಲಿ ಅವರು ಗೆದ್ದಿದ್ದ ಬೆಳ್ಳಿ ಪದಕ ಇದೀಗ ಯೋಗೇಶ್ವರ್ ಪಾಲಾಗುವ ಸಾಧ್ಯತೆ ಇದೆ.
ಈ ಬಗ್ಗೆ ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಮತ್ತು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ ಅಂತಿಮ ಘೋಷಣೆಯನ್ನು ಮಾಡಬೇಕಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.