ನವದೆಹಲಿ: ಮೂರು ದಿವಸಗಳ ಪ್ರವಾಸಕ್ಕಾಗಿ ಭಾರತಕ್ಕೆ ಆಗಮಿಸಿರುವ ಅಫ್ಘಾನಿಸ್ತಾನ ಅಧ್ಯಕ್ಷ ಆಶ್ರಫ್ ಘನಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ದೆಹಲಿಯ ಹೈದರಾಬಾದ್ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.
7 ತಿಂಗಳ ಹಿಂದೆ ಅಫ್ಘಾನಿನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಘನಿ ಅವರದ್ದು ಇದು ಮೊದಲ ಭಾರತ ಭೇಟಿಯಾಗಿದೆ. ಆದರೆ ನವೆಂಬರ್ನಲ್ಲಿ ಕಠ್ಮಂಡುವಿನಲ್ಲಿ ನಡೆದ ಸಾರ್ಕ್ ಶೃಂಗಸಭೆಯಲ್ಲಿ ಅವರು ಮೋದಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.
ಸೋಮವಾರ ರಾತ್ರಿ ಭಾರತಕ್ಕೆ ಬಂದಿಳಿದ ಅವರನ್ನು ಪಲಮ್ ವಿಮಾನನಿಲ್ದಾಣದಲ್ಲಿ ಸಚಿವ ಜಯಂತ್ ಸಿನ್ಹಾ ಸ್ವಾಗತಿಸಿದರು. ಅಫ್ಘಾನಿನ ಕುಂದುಝ್ ಪ್ರಾಂತ್ಯದಲ್ಲಿ ತಾಲಿಬಾನ್ ದಾಳಿ ನಡೆದ ಹಿನ್ನಲೆಯಲ್ಲಿ ಅವರ ಆಗಮನ ತಡವಾಯಿತು ಎಂದು ಮೂಲಗಳು ತಿಳಿಸಿವೆ.
ಇಂದು ಅವರು ರಾಷ್ಟ್ರಪತಿ ಭವನದ ದ್ವಾರಕ ಸುತೆಯಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರೊಂದಿಗೆ ಮಾತುಕತೆ ನಡೆಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.