ನವದೆಹಲಿ : ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕೆಂದು ಮನವಿ ಮಾಡಿದ್ದಾರೆ.
ಬುಧವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ನಿಯೋಗವು, ತುಳು ಭಾಷೆಯನ್ನು ಕರ್ನಾಟ, ಕೇರಳ, ಮುಂಬಯಿ ಸೇರಿದಂತೆ ವಿಶ್ವದ ಹಲವೆಡೆ ಸುಮಾರು ಒಂದು ಕೋಟಿ ಜನರು ಮಾತನಾಡುತ್ತಿದ್ದಾರೆ. ತುಳು ಭಾಷೆ ದ್ರಾವಿಡ ಪ್ರಾಚೀನ ಭಾಷೆಯಾಗಿದ್ದು, ಇದಕ್ಕೆ ಸರಿಸುಮಾರು 2,800 ವರ್ಷಗಳ ಇತಿಹಾಸವಿದೆ. ಈಗಾಗಲೇ ತಮಿಳುನಾಡು ಮತ್ತು ಹೈದರಾಬಾದ್ನಲ್ಲಿ ತುಳು ಅಧ್ಯಯನ ಪೀಠಗಳು ಕಾರ್ಯ ನಿರ್ವಹಿಸುತ್ತಿದೆ. ತುಳು ಭಾಷೆಗೆ ಮಾನ್ಯತೆ ನೀಡಿದರೆ ಅಧ್ಯಯನಕ್ಕೂ ಬಲ ಬರಲಿದ್ದು, ಕೋಟ್ಯಾಂತರ ತುಳು ಮಾತನಾಡುವ ಜನರ ಕನಸು ಈಡೇರಿದಂತಾಗುತ್ತದೆ ಎಂದು ನಿಯೋಗದ ನೇತೃತ್ವ ವಹಿಸಿದ್ದ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಪ್ರಧಾನಿಯವರಲ್ಲಿ ಮನವಿ ಮಾಡಿದ್ದಾರೆ.
ತುಳು ಭಾಷೆಗೆ ಮಾನ್ಯತೆ ನೀಡಲು ಸಂಬಂಧಪಟ್ಟ ಸಚಿವರು, ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂಬ ಭರವಸೆಯನ್ನು ಪ್ರಧಾನಿ ಮೋದಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.