ನವದೆಹಲಿ: ಪ್ರತಿಷ್ಠಿತ ನಾಗರಿಕ ಸೇವಾ ಪರೀಕ್ಷೆ (ಯುಪಿಎಸ್ಇ)ಯ ಕ್ರಮವನ್ನು ಮಾರ್ಪಾಡು ಮಾಡುವ ಮೂಲಕ ಅಪ್ಲಿಕೇಶನ್ ಫಾರ್ಮ್ಗಳಲ್ಲಿ ತೃತೀಯ ಲಿಂಗಿಗಳನ್ನು ಅಳವಡಿಸಲು ತ್ವರಿತ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ತೃತೀಯ ಲಿಂಗಿಗಳಿಗೆ ಕಾನೂನು ಮನ್ನಣೆ ನೀಡುವಂತೆ ಸುಪ್ರೀಂ ಕೋರ್ಟ್ ಎಪ್ರಿಲ್ 2014ರಲ್ಲಿ ನೀಡಿದ ತೀರ್ಪು ಉಲ್ಲೇಖಿಸುತ್ತಾ ಮುಖ್ಯ ನ್ಯಾಯಮೂರ್ತಿ ಜಿ. ರೋಹಿಣಿ ಮತ್ತು ನ್ಯಾ. ಸಂಗೀತಾ ಧಿಂಗ್ರಾ ಸೆಹಗಲ್ ಅವರ ನ್ಯಾಯಪೀಠ ತ್ವರಿತ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಕೇಳಿಕೊಂಡಿದೆ.
ಎಪ್ರಿಲ್ 2014ರ ತೀರ್ಪು ತೃತೀಯ ಲಿಂಗಿಗಳಿಗೆ ಮಾತ್ರ ಸಂಬಂಧಿಸಿದ್ದು, ಇದರಲ್ಲಿ ಸಲಿಂಗಕಾಮಿಗಳು ದ್ವಿಲಿಂಗಿಗಳಿಗೆ ಅವಕಾಶ ನೀಡಲಾಗಿಲ್ಲ ಎಂಬ ಅರ್ಜಿಯನ್ನು ಸುಪ್ರೀಂ ಕೋರ್ಟ್ ಜೂನ್ 2016ರಲ್ಲಿ ವಜಾಗೊಳಿಸಿತ್ತು ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಸಂಜಯ್ ಜೈನ್ ಪೀಠಕ್ಕೆ ತಿಳಿಸಿದ್ದರು.
ಮೇ 23ರ ಅಧಿಸೂಚನೆ ಅನುಸಾರ ಪರೀಕ್ಷೆ ನಡೆಸುವ ದೃಷ್ಟಿಯಿಂದ ರಿಟ್ ಅರ್ಜಿ ವಜಾಗೊಳಿಸಲಾಗಿದ್ದು, ಸುಪ್ರೀಂ ಕೋರ್ಟ್ ತೀರ್ಪಿನ ಆಧಾರದಲ್ಲಿ ತ್ವರಿತ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಪೀಠ ನಿರ್ದೇಶಿಸಿದೆ.
2015ರ ಯುಪಿಎಸ್ಇ ಪರೀಕ್ಷೆಯಲ್ಲಿ ತೃತೀಯ ಲಿಂಗಿಗಳಿಗೆ ಅವಕಾಶ ನೀಡದ್ದರ ಕುರಿತು ಮೇ 23, 2015ರಲ್ಲಿ ನೀಡಿದ್ದ ನೋಟಿಸ್ ವಿರುದ್ಧ ವಕೀಲ ಜಮ್ಶೇದ್ ಅನ್ಸಾರಿ ಅರ್ಜಿ ಸಲ್ಲಿಸಿದ್ದರು. ಈ ಪಿಐಎಲ್ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.