ನವದೆಹಲಿ : ಮಹಾತ್ಮಾ ಗಾಂಧಿಯನ್ನು ಕೊಂದಿದ್ದು ಆರ್ಎಸ್ಎಸ್ ಎಂಬ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ ಎಂದು ಹೇಳುವ ಮೂಲಕ ಮತ್ತೊಮ್ಮೆ ಯೂ ಟರ್ನ್ ತೆಗೆದುಕೊಂಡಿದ್ದಾರೆ ರಾಹುಲ್ ಗಾಂಧಿ.
ಮಹಾತ್ಮಾ ಗಾಂಧಿಯನ್ನು ಕೊಂದಿದ್ದು ಆರ್ಎಸ್ಎಸ್ ಎಂಬ ಹೇಳಿಕೆಯ ಕುರಿತು ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಾಪಸ್ಸು ಪಡೆದಿದ್ದು, ಪ್ರಕರಣದ ವಿಚಾರಣೆಯನ್ನು ಎದುರಿಸುವುದಾಗಿ ತಿಳಿಸಿದ್ದಾರೆ.
2014 ರಲ್ಲಿ ಮಹಾರಾಷ್ಟ್ರದ ಭೀವಂಡಿಯಲ್ಲಿ ಚುನಾವಣಾ ಪ್ರಚಾರ ಸಂದರ್ಭ ಮಹಾತ್ಮಾ ಗಾಂಧಿ ಹತ್ಯೆಗೆ ಆರ್ಎಸ್ಎಸ್ ಕಾರಣ ಎಂಬ ಹೇಳಿಕೆ ನೀಡಿದ್ದರು. ಇದನ್ನು ಪ್ರಶ್ನಿಸಿ ಆರ್ಎಸ್ಎಸ್ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿತ್ತು.
ಆದರೆ ಕಳೆದ ಬಾರಿ ವಿಚಾರಣೆಯಲ್ಲಿ ರಾಹುಲ್ ಪರವಾಗಿ ವಾದಿಸಿದ್ದ ಕಪಿಲ್ ಸಿಬಲ್ ಅವರು ರಾಹುಲ್ ಗಾಂಧಿ ಆರ್ಎಸ್ಎಸ್ ಸಂಘಟನೆ ಮಹಾತ್ಮಾ ಗಾಂಧಿ ಹತ್ಯೆಗೆ ಕಾರಣ ಎಂದು ಹೇಳಿರಲಿಲ್ಲ. ಆರ್ಎಸ್ಎಸ್ಗೆ ಸೇರಿದ ವ್ಯಕ್ತಿ ಎಂದು ಹೇಳಿದ್ದು, ಆದರೆ ಜನರು ಇದನ್ನು ಆರ್ಎಸ್ಎಸ್ಗೆ ಸಂಬಂಧ ಕಲ್ಪಿಸಿದ್ದರು ಎಂದು ತಿಳಿಸಿದ್ದರು. ಈ ಮೂಲಕ ರಾಹುಲ್ ಆಗ ತಾವು ಹೇಳಿದ್ದನ್ನು ಈ ರೀತಿ ಸಮರ್ಥಿಸಿಕೊಂಡಿದ್ದರು.
ಮತ್ತೀಗ ಕೆಲ ದಿನಗಳ ಹಿಂದೆ ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ ತಮ್ಮ ಭಾಷಣದ ತುಣಕನ್ನು ಟ್ವೀಟ್ ಮಾಡಿ, ತಮ್ಮ ಹೇಳಿಕೆಗೆ ಬದ್ಧ ಹಾಗೂ ವಿಚಾರಣೆಗೆ ಸಿದ್ಧ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.